ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಂದ ಬಿಡುವು ಕೊಡದೆ ಸುರಿಯುತ್ತಿದೆ ಮಳೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2021 ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಕಳೆದ ಎರಡು ದಿನದಿಂದ ಕಡಿಮೆಯಾಗಿದ್ದ ವರುಣ ಪುನಃ ಪ್ರತ್ಯಕ್ಷವಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯದ್ಯಂತ ರಾತ್ರಿಯಿಂದ ಮಳೆ ಪುನಾರಂಭವಾಗಿದೆ. ಜೋರು ಮಳೆಯಿಂದಾಗಿ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುವಂತಾಗಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ನಿರಂತರ ಮಳೆಯಾಗುತ್ತಿದೆ. ಕೆಲ ಹೊತ್ತು ಜೋರಾಗಿ ಸುರಿಯುವ ಮಳೆ, ಬಳಿಕ ಜಿಟಿಜಿಟಿಯಾಗಿ ಬೀಳುತಿತ್ತು. ಬಳಿಕ ಜೋರು ಮಳೆ ಆರಂಭವಾಗಿದೆ.

ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕ ಉಂಟಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಚರಂಡಿಗಳನ್ನು ಬಂದ್ ಮಾಡಲಾಗಿದೆ. ಹಾಗಾಗಿ ನಗರದ ಕೆಲವು ಕಡೆ ರಸ್ತೆಯಲ್ಲಿ ನೀರು ನಿಂತಿದೆ.

ಇನ್ನು, ನಿರಂತರ ಮಳೆಯಿಂದಾಗಿ ಕೆಲವು ಕಡೆ ತೋಟ, ಗದ್ದೆಗಳಲ್ಲಿ ನೀರು ನಿಂತಿದೆ. ಇತ್ತೀಚೆಗೆ ಭತ್ತ, ಶುಂಠಿ, ಜೋಳದ ಬಿತ್ತನೆ ಮಾಡಲಾಗಿತ್ತು. ಈಗ ಗದ್ದೆಯಲ್ಲಿ ನೀರು ನಿಂತಿದ್ದು, ಬೆಳಹಾನಿಯಾಗುವ ಆತಂಕವಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment