SHIVAMOGGA LIVE NEWS, 3 JANUARY 2024
ಶಿವಮೊಗ್ಗ : ಗುತ್ತಿಗೆದಾರ (Contractor) ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ. ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಅವರ ಅಭಿಮಾನಿಗಳ ಬಳಗ ಆರೋಪಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿ ನಡೆಸಿದ ಬಳಗದ ಪ್ರಮುಖರು, ಸಚಿನ್ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಮಲ್ಲಿಕಾರ್ಜುನ ಖರ್ಗೆಯವರ ಆಶ್ರಯದಲ್ಲಿ ಬೆಳೆದ ಛಲವಾದಿ ನಾರಾಯಣ ಸ್ವಾಮಿ ಈಗ ಆರ್ಎಸ್ಎಸ್ನ ನಿಷ್ಠಾವಂತ ಕಾರ್ಯಕರ್ತನಂತೆ ವರ್ತಿಸುತ್ತಿದ್ದಾರೆ. ಖರ್ಗೆ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ.
ವಿ.ವಿನೋದ್, ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ಅಧ್ಯಕ್ಷ
ಆದರ್ಶ ಪಾಟೀಲ್, ಸೆಂಥಿಲ್ ಕುಮಾರ್, ಕರಿಯಪ್ಪ, ಸುನಿಲ್ ಕೋಠಿ ಸೇರಿ ಹಲವರು ಇದ್ದರು.
ಇದನ್ನೂ ಓದಿ » ‘ನನಗೆ ತೊಂದರೆ ಕೊಟ್ಟವರೆಲ್ಲ ಅನುಭವಿಸಿದ್ದಾರೆ, ಇನ್ಮುಂದೆಯು ಅನುಭವಿಸುತ್ತಾರೆʼ