ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 JANUARY 2024
SHIMOGA : ನಗರದ ಫ್ರೀಡಂ ಪಾರ್ಕ್ಗೆ ಹೆಸರಿನ ವಿಚಾರವಾಗಿ ಯುವನಿಧಿ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಮತ್ತು ಬಿಜೆಪಿ ಶಾಸಕ ಚನ್ನಬಸಪ್ಪ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕೊನೆಗೆ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಮಧು ಬಂಗಾರಪ್ಪ ಸೂಚಿಸಿದ ಹೆಸರಿಗೆ ಒಪ್ಪಿಗೆ ನೀಡಿ, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮೆಚ್ಚುಗೆ ಪಡೆದರು.
ನಗರದ ಫ್ರೀಡಂ ಪಾರ್ಕ್ಗೆ ವಚನಕಾರ ಅಲ್ಲಮಪ್ರಭು ಅವರ ಹೆಸರು ಇಡಬೇಕು ಎಂದು ಸಚಿವ ಮಧು ಬಂಗಾರಪ್ಪ ಪ್ರಸ್ತಾಪಿಸಿದರು. ಭಾಷಣದ ವೇಳೆ ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು, ಈ ಹಿಂದೆ ಫ್ರೀಡಂ ಪಾರ್ಕ್ ಉದ್ಘಾಟನೆ ಸಂದರ್ಭ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಚಂದ್ರಶೇಖರ್ ಆಜಾದ್ ಅವರ ಹೆಸರು ಘೋಷಿಸಿದ್ದರು. ಅದ್ದರಿಂದ ಚಂದ್ರಶೇಖರ್ ಆಜಾದ್ ಅವರ ಹೆಸರನ್ನೆ ಇಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ – ಯುವನಿಧಿ ವೇದಿಕೆಯಲ್ಲಿ ಸಿಎಂಗೆ 3 ಬೇಡಿಕೆ ಸಲ್ಲಿಸಿದ ಸಂಸದ ರಾಘವೇಂದ್ರ, ಏನೇನದು?
ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ಫ್ರೀಡಂ ಪಾರ್ಕ್ ಸ್ಥಾಪನೆಯಾಗಿದ್ದು. ಇನ್ನು, ವಚಕನಾರ ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರು. ಬಸವಣ್ಣನವರ ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಅನುಭವ ಮಂಟಪದಿಂದಾಗಿಯೇ ಈಗ ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್ತುಗಳಾಗಿರುವುದು. ಆದ್ದರಿಂದ ಅಲ್ಲಮಪ್ರಭು ಅವರ ಹೆಸರು ಇಡುವುದೆ ಸೂಕ್ತ ಎಂದು ವಿವಾದಕ್ಕೆ ತೆರೆ ಎಳೆದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422