ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿ ನಾಲ್ಕು ದಿನ ಕಠಿಣ ಲಾಕ್ ಡೌನ್ ನಿರ್ಧಾರ ಹಲವರ ವಿರೋಧಕ್ಕೆ ಕಾರಣವಾಗಿದೆ. ಅಲ್ಲದೆ ವಿವಾದದ ಸ್ವರೂಪವನ್ನು ಪಡೆಯುತ್ತಿದೆ.
ರಂಜಾನ್ ಮತ್ತು ಅಕ್ಷಯ ತೃತೀಯ ಹಬ್ಬಗಳು ಇರುವ ಕಾರಣಕ್ಕೆ ಲಾಕ್ ಡೌನ್ ಘೋಷಣೆ ಮಾಡಿರುವ ಸಾದ್ಯತೆ ಇದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ತೀವ್ರ ಚರ್ಚೆಯಾಗುತ್ತಿದೆ.
ಕಾಂಗ್ರೆಸ್ನಿಂದ ತೀವ್ರ ವಿರೋಧ
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ದಿನ ಕಠಿಣ ಲಾಕ್ ಡೌನ್ ಹಿಂದೆ ರಂಜಾನ್ ಹಬ್ಬ ಮತ್ತು ಅಕ್ಷಯ ತೃತೀಯಕ್ಕೆ ಸಮಸ್ಯೆ ಮಾಡುವ ಯೋಚನೆ ಇದ್ದಂತಿದೆ. ಸಚಿವ ಈಶ್ವರಪ್ಪ ಅವರು ವಿಜ್ಞ ಸಂತೋಷಿಯಾಗಿದ್ದಾರೆ. ಅವರೊಬ್ಬರಗೆ ಪೊಲೀಸ್ ಭದ್ರತೆಯಲ್ಲಿ ಕಾರಿನಲ್ಲಿ ನಗರ ಸುತ್ತುವಂತಹ ಯೋಚನೆ ಇದ್ದಂತಿದೆ ಎಂದು ಆರೋಪಿಸಿದರು.
ಹಬ್ಬಗಳಿಗೆ ಯಾವುದೆ ತೊಂದರೆಯಿಲ್ಲ
ಈ ನಡುವೆ ಲಾಕ್ ಡೌನ್ ವಿಚಾರ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಲಾಕ್ ಡೌನ್ ಇದ್ದರೂ ಹಬ್ಬಗಳಿಗೆ ತೊಂದರೆ ಮಾಡುವುದಿಲ್ಲ. ಹಬ್ಬಗಳ ಖರೀದಿಗೆ ಅವಕಾಶ ನೀಡುತ್ತೇವೆ. ಇದಕ್ಕೆ ಯಾವುದೆ ಅಡ್ಡಿ ಉಂಟು ಮಾಡುವುದಿಲ್ಲ ಎಂದರು.
ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್, ಮನೆಯಿಂದ ಹೊರಗೆ ಬರುವಂತೆಯೇ ಇಲ್ಲ
ಶಾಸಕರ ಆರೋಪವೇನು? ಸಚಿವರು ಹೇಳಿದ್ದೇನು? ವಿಡಿಯೋ ವರದಿ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






