ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 8 SEPTEMBER 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಲೈವ್.ಕಾಂ : ಬೈಕ್ ವೀಲಿಂಗ್ (Stunt) ಮಾಡಿ ಹೆದ್ದಾರಿಯಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ ದಂಡ ವಿಧಿಸಿದೆ. ಈ ಮಧ್ಯೆ ವೀಲಿಂಗ್ ಮಾಡುವವರಿಗೆ ಶಿಕ್ಷೆಯಾಗಲಿದೆ ಎಂದು ತೋರಿಸಲು ಸಂಚಾರ ಪೊಲೀಸರು ಮಾಡಿರುವ ರೀಲ್ಸ್ ವೈರಲ್ ಆಗಿದೆ. ಸಾಗರ ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನನ್ನು ಪತ್ತೆ ಹೆಚ್ಚಿದ್ದಾರೆ. ಪಿಎಸ್ಐ ತಿರುಮಲೇಶ್ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ 5500 ರೂ. ದಂಡ ವಿಧಿಸಿದೆ. ದಂಡ ಪಾವತಿಸಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ವೀಲಿಂಗ್ ಮಾಡಿದವನಿಗೆ ದಂಡ, ವಿಡಿಯೋ ವೈರಲ್
ಶಿವಮೊಗ್ಗ ಲೈವ್.ಕಾಂ : ಪ್ರಸಕ್ತ ಸಾಲಿನಲ್ಲಿ ಪ್ರವಾಹ ಮತ್ತು ಅತಿವೃಷ್ಟಿಗೆ ಬೆಳೆಹಾನಿ ಸಂಭವಿಸಿದವರಿಗೆ ಪರಿಹಾರಕ್ಕೆ ಪಾವತಿಸಲು ಫಲಾನುಭವಿಗಳ ಪಟ್ಟಿ ಪ್ರಕಟಿಸಲಾಗಿದೆ. ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಕಚೇರಿಗಳು, ಗ್ರಾಮ ಪಂಚಾಯತ್ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ www.nic.shimoga.in ಪ್ರಕಟಿಸಲಾಗಿದೆ. ಈ ಕುರಿತು ಆಕ್ಷೇಪ ಇದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆಯ ತಾಲ್ಲೂಕು ಕಛೇರಿಗಳಲ್ಲಿ 7 ದಿನಗಳ ಒಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪರಿಹಾರಕ್ಕೆ ಫಲಾನುಭವಿಗಳ ಪಟ್ಟಿ ಪ್ರಕಟ
ಸರ್ವ ಸದಸ್ಯರ ಸಭೆ ಶಿವಮೊಗ್ಗ ಲೈವ್.ಕಾಂ : ಶ್ರೀ ರಾಮಸೇವಾ ಭಾವಸಾರ ಕ್ಷತ್ರಿಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ 107ನೇ ಸರ್ವ ಸದಸ್ಯರ ಸಭೆಯನ್ನು ಇಲ್ಲಿನ ರಾಮಣ್ಣಶ್ರೇಷ್ಠಿ ಪಾರ್ಕ್, ಸರ್ವಸಿದ್ಧಿ ವಿನಾಯಕ ಸ್ವಾಮಿ ಕಲ್ಯಾಣ ಮಂದಿರದಲ್ಲಿ ಸೆ.22 ರಂದು ಬೆಳಿಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷ ಎಸ್. ಸಂತೋಷ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಸಾವಿರ ಕೋಟಿಯ ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಓಡಾಡುವಾಗ ಎಚ್ಚರ.. ಎಚ್ಚರ.., ಯಾಕೆ ಗೊತ್ತಾ?