ಶಿವಮೊಗ್ಗ ಲೈವ್.ಕಾಂ | SHIMOGA | 20 ಮಾರ್ಚ್ 2020
ಜಗತ್ತನ್ನು ತಲ್ಲಣಗೊಳಿಸಿರುವ ಕರೋನ ಸೋಂಕು ಹರಡದಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಶಾಪಿಂಗ್ ಕಾಂಪ್ಲೆಕ್ಸ್, ಬೀದಿ ಬದಿ ವ್ಯಾಪಾರ, ಫುಡ್ ಕೋರ್ಟ್’ಗಳನ್ನು ಬಂದ್ ಮಾಡಲಾಗುತ್ತಿದೆ ಎಂದರು ತಿಳಿಸಿದರು.
ಪ್ರಧಾನಿ ಸೂಚಿಸಿದಂತೆ ನಡೆಯೋಣ
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜನತಾ ಕರ್ಫ್ಯೂ ಎಂದು ಸೂಚಿಸಿದ್ದಾರೆ. ಅದರಂತೆ ಆ ದಿನ ಜನರು ಮನೆಯೊಳಗೆ ಇದ್ದು, ಕರೋನ ಸೋಂಕು ಹರಡದಂತೆ ತಡೆಯಬೇಕಿದೆ ಎಂದು ಮೇಯರ್ ಸುವರ್ಣ ಶಂಕರ್ ಮನವಿ ಮಾಡಿದರು.
ಪಾಲಿಕೆ ಏನೆಲ್ಲ ಕ್ರಮ ಕೈಗೊಂಡಿದೆ?
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ಕಮಿಷನರ್ ಚಿದಾನಂದ ವಠಾರೆ ಅವರು, ಕರೋನ ಹಿನ್ನೆಲೆ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಶಾಪಿಂಗ್ ಮಾಲ್, ಕ್ಲಬ್, ಜಿಮ್, ಸ್ವಿಮ್ಮಿಂಗ್ ಪೂಲ್, ರಂಗಮಂದಿರಗಳು, ಚಿಕನ್, ಮಟನ್ ಶಾಪ್’ಗಳು ಮುಚ್ಚಲು ಕ್ರಮ

ಮದುವೆ, ಜಾತ್ರೆ, ಸಂತೆ, ವಸ್ತು ಪ್ರದರ್ಶನ, ಸಂಗೀತ ಹಬ್ಬ, ಕ್ರೀಡಾಕೂಟ, ಸಾರ್ವಜನಿಕರು ಹೆಚ್ಚು ಸೇರುವ ಸಭೆ, ಸಮಾರಂಭಗಳು ತಾತ್ಕಾಲಿಕ ನಿಷೇಧ
ಬೀದಿ ಬದಿ ವ್ಯಾಪಾರ ಮಾಡುವ ತಿಂಡಿ, ತಿನಿಸು, ಸಸ್ಯಾಹಾರ ಮತ್ತು ಮಾಂಸಾಹಾರ ಫುಡ್ ಕೋರ್ಟ್’ಗಳು ಬಂದ್.
ವಾರ್ಡ್’ವಾರು ಔಷಧಿ ಸಿಂಪಡಣೆ, ಫಾಗಿಂಗ್ ಮಾಡಲಾಗುತ್ತಿದೆ. ಈಗಾಗಲೇ ವಿನೋಬನಗರ, ಹೊಸಮನೆ ಬಡಾವಣೆಯಲ್ಲಿ ಫಾಗಿಂಗ್ ಮಾಡಲಾಗಿದೆ.

ಹೊಟೇಲ್’ಗಳಲ್ಲಿ ಶುಚಿತ್ವ ಕಾಪಾಡಬೇಕು. ಗ್ರಾಹಕರಿಗೆ ಬಿಸಿ ನೀರು ಪೂರೈಸಬೇಕು. ಕೆಲಸಗಾರರ ವೈಯಕ್ತಿಕ ಶುಚಿತ್ವಕ್ಕೆ ನಿಗಾ ವಹಿಸಬೇಕು ಎಂದು ಸೂಚಿಸಲಾಗಿದೆ.
ಕರೋನ ಕುರಿತು ಜಾಗೃತಿ ಮೂಡಿಸಲು ಸಾರ್ವಜನಿಕ ಪ್ರದೇಶದಲ್ಲಿ ಫ್ಲೆಕ್ಸ್ ಅಳವಡಿಸಲಾಗಿದೆ. ಕಸ ಸಂಗ್ರಹಣೆ ವಾಹನಗಳಲ್ಲಿ ಈಗಾಗಲೇ ಮೈಕ್ ಮೂಲಕ ಜಾಗೃತಿ ಸಂದೇಶ ಪ್ರಸಾರ ಮಾಡಲಾಗುತ್ತಿದೆ.
ವಿದೇಶ ಮತ್ತು ಅನ್ಯ ರಾಜ್ಯಗಳಿಂದ ಬಂದಿರುವವರು ಮತ್ತು ಬರುತ್ತಿರುವವರ ಕುರಿತು ಮಾಹಿತಿ ಪಡೆದು, ಅರೋಗ್ಯ ಇಲಾಖೆಗೆ ರವಾನಿಸಲಾಗುತ್ತಿದೆ.

ಪ್ರವಾಹ ಸಂದರ್ಭದಲ್ಲಿ ತಂಡಗಳನ್ನು ರಚಿಸಿದ ಮಾದರಿಯಲ್ಲೇ ಕರೋನ ಹಿನ್ನೆಲೆಯಲ್ಲೂ ತಂಡ ರಚಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಕಮಿಷನರ್ ಚಿದಾನಂದ ವಠಾರೆ ಅವರು ತಿಳಿಸಿದರು. ಸಹಾಯವಾಣಿ ಸಂಖ್ಯೆ 104, 08066692000, 08046848600
ಉಪಮೇಯರ್ ಸುರೇಖಾ ಮುರಳೀಧರ್, ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವು ಕಾರ್ಪೊರೇಟರ್’ಗಳು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200