ಮೆಗ್ಗಾನ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಿಗದ ಆರೋಪ, ನರಳಿ ಪ್ರಾಣ ಬಿಟ್ಟ ಸೋಂಕಿತ, ವಿಡಿಯೋ ವರೈಲ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಆಕ್ಸಿಜನ್ ಇಲ್ಲದೆ, ವೆಂಟಿಲೇಟರ್ ಸಿಗದೆ ಒಬ್ಬನೆ ಒಬ್ಬ ಸೋಂಕಿತ ಸಾವನ್ನಪ್ಪಲು ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿ ಎರಡು ದಿನ ಕಳೆಯುವುದರಲ್ಲಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಸೋಂಕಿತರೊಬ್ಬರಿಗೆ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ವಿಡಿಯೋ ವೈರಲ್ ಆಗಿದೆ.

ಶಿಕಾರಿಪುರದ ಆನಂದ್ (46) ಮೃತ ದುರ್ದೈವಿ. ಕರೋನ ಹಿನ್ನೆಲೆ ಶನಿವಾರ ಸಂಜೆ ಆನಂದ್ ಅವರು ಮಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಎರಡು ಗಂಟೆ ಕಾದರೂ ವೆಂಟಿಲೇಟರ್ ಸಿಗದೆ, ಒದ್ದಾಡಿ ಆನಂದ ಮೃತಟ್ಟಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ವಿಡಿಯೋ ವೈರಲ್

ಆಸ್ಪತ್ರೆಯಲ್ಲಿ ಆನಂದ್ ಅವರಿಗೆ ಜನರಲ್ ವಾರ್ಡ್‍ನಲ್ಲಿ ಚಿಕಿತ್ಸೆ ಕೊಡಲಾಗಿದೆ. ಅವರು ಕೆಮ್ಮುತ್ತ, ಒದ್ದಾಡುವ ವಿಡಿಯೋ ವೈರಲ್ ಆಗಿದೆ. ನರ್ಸ್ ಒಬ್ಬರು ಆನಂದ್‍ ಅವರಿಗೆ ಚಕಿತ್ಸೆ ನೀಡಿವುದು, ಆನಂದ್ ಅವರ ಪತ್ನಿ ದುಗುಡದಲ್ಲಿರುವುದು ವಿಡಿಯೋದಲ್ಲಿ ದಾಖಲಾಗಿದೆ.

(ವಿಡಿಯೋ ಪ್ರಕಟಿಸುವುದಿಲ್ಲ)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment