ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021
ವೀಕೆಂಡ್ ಕರ್ಫ್ಯೂ ಸಂದರ್ಭ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರ ಮುಂದೆ ಕೋವಿಡ್ ಸೋಂಕಿತನೊಬ್ಬ ಪ್ರತ್ಯಕ್ಷನಾಗಿ ಬೆಚ್ಚಿಬೀಳಿಸಿದ್ದಾನೆ. ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ನಲ್ಲಿ ಘಟನೆ ಸಂಭವಿಸಿದೆ.
![]() |
ಹೇಗಾಯ್ತು ಘಟನೆ?
ಅಮೀರ್ ಅಹಮದ್ ಸರ್ಕಲ್ನಲ್ಲಿ ಬೆಳಗ್ಗೆಯಿಂದಲೂ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರು. ಮಧ್ಯಾಹ್ನದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ ಪ್ರಶ್ನಿಸಿದಾಗ, ನಾನು ಕೋವಿಡ್ ಪೇಷೆಂಟ್ ಅಂತಾ ಹೇಳಿ, ಸುತ್ತಲು ಇದ್ದವರನ್ನು ಬೆಚ್ಚಿ ಬೀಳಿಸಿದ.
ದಾಖಲೆಗಳ ಪರಿಶೀಲನೆ ವೇಳೆ ಕೋವಿಡ್ ಪಾಸಿಟಿವ್ ದಾಖಲೆ ಪ್ರದರ್ಶಿಸಿದ. ಇದನ್ನು ಕಂಡು ದಂಗಾದ ಪೊಲೀಸರು, ಪಾಸಿಟಿವ್ ಇದ್ದವರು ರಸ್ತೆಯಲ್ಲೇಕೆ ಓಡಾಡ್ತಿದ್ದೀರ ಎಂದು ಪ್ರಶ್ನಿಸಿದರು. ಈಗ ಆಸ್ಪತ್ರೆಯಿಂದ ಬರುತ್ತಿದ್ದೇನೆ ಎಂದು ಸೋಂಕಿತ ಉತ್ತರಿಸಿದ. ಸುತ್ತಲು ಇದ್ದ ಪೊಲೀಸರು, ವಾಹನಗಳ ದಾಖಲೆ ತೋರಿಸಲು ನಿಂತಿದ್ದವರು, ಮಾಧ್ಯಮದವರು ದಂಗಾದರು.
ಕೂಡಲೆ ಆ ಸೋಂಕಿತನನ್ನು ಮನೆಗೆ ತೆರಳುವಂತೆ ಸೂಚಿಸಿದ ಪೊಲೀಸರು, ಕಂಟ್ರೋಲ್ ರೂಂಗೆ ಮಾಹಿತಿ ನೀಡಿದರು. ಉಳಿದ ಪೊಲೀಸರನ್ನು ಅಲರ್ಟ್ ಮಾಡಿದರು.
ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200