ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020
ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯೆಯೊಬ್ಬರಿಗೆ ಕರೋನ ಸೋಂಕು ತಗುಲಿದೆ. ಇದು ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯೆಯೊಂದಿಗೆ ಸಂಪರ್ಕದಲ್ಲಿ ಇದ್ದವರಲ್ಲಿ ಆತಂಕ ಮೂಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪಿ6411ಗೆ ಕರೋನ ಸೋಂಕು ತಗುಲಿದೆ. 24 ವರ್ಷದ ವೈದ್ಯೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ಈತನಕ ತಿಳಿದು ಬಂದಿಲ್ಲ. ಇದರಿಂದ ಆಸ್ಪತ್ರೆಯಲ್ಲಿ ವೈದ್ಯೆಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಆತಂಕಕ್ಕೀಡಾಗಿದ್ದಾರೆ.
ವೈದ್ಯೆ ಹಾಸ್ಟೆಲ್‍ನಲ್ಲಿ ಇದ್ದರು. ಹಾಗಾಗಿ ಅಲ್ಲಿಯೂ ಹಲವರಲ್ಲಿ ಆತಂಕ ಮೂಡಿದೆ. ವೈದ್ಯೆ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರ ಪತ್ತೆ ಕಾರ್ಯ ನಡೆಯುತ್ತಿದೆ.
ಈ ಹಿಂದೆ ಶಿವಮೊಗ್ಗ ತಾಲೂಕಿನ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯೆಯೊಬ್ಬರಿಗೆ ಕರೋನ ಸೋಂಕು ತಗುಲಿತ್ತು. ಸೋಂಕಿತ ವ್ಯಕ್ತಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದರಿಂದ ವೈದ್ಯೆಗೆ ಕರೋನ ಪಾಸಿಟಿವ್ ಬಂದಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆ ವೈದ್ಯೆ ಗುಣಮುಖರಾಗಿದ್ದರು. ಇತ್ತೀಚೆಗೆ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]