ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020
ಶಿವಮೊಗ್ಗದ ಪ್ರಮುಖ ರಾಜಕಾರಣಿಗಳಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದು ಅವರ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ್ತು ಹಿತೈಷಿಗಳಲ್ಲಿ ಆತಂಕ ಸೃಷ್ಟಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾವೆಲ್ಲ ರಾಜಕಾರಣಿಗಳಿಗೆ ಸೋಂಕು ತಗುಲಿದೆ?
ಪ್ರಸನ್ನ ಕುಮಾರ್, ವಿಧಾನ ಪರಿಷತ್ ಸದಸ್ಯ | ಇತ್ತೀಚೆಗೆ ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮರಳಿದ್ದರು. ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ. ಚಿಕಿತ್ಸೆ ನಡೆಯುತ್ತಿದೆ.
ವಿಧಾನ ಪರಿಷತ್ ಮಾಜಿ ಸದಸ್ಯ | ಭಾನುವಾರ ಸೋಂಕು ದೃಢವಾಗಿದೆ. ಶಿವಮೊಗ್ಗ ನಗರದ ಗ್ರಾಮದಲ್ಲಿ ಇವರ ಮನೆ ಸುತ್ತಮುತ್ತ ಸ್ಯಾನಿಟೈಸ್ ಮಾಡಲಾಗಿದೆ.
ಜೆಡಿಎಸ್ ಮುಖಂಡ | ಶಿವಮೊಗ್ಗ ನಗರದ ಜೆಡಿಎಸ್ ಪಕ್ಷದ ಮುಖಂಡರೊಬ್ಬರಿಗೆ ಕರೋನ ಸೋಂಕು ತಗುಲಿದೆ. ಸೀಗೆಹಟ್ಟಿಯಲ್ಲಿರುವ ಇವರ ಮನೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನೆಹರೂ ರಸ್ತೆಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸ್ಯಾನಿಟೈಸ್ ಮಾಡಲಾಗಿದೆ.
ಅಧಿಕಾರಿಗಳಿಗೂ ಕರೋನ ಶಾಕ್
ಶಿವಮೊಗ್ಗ ಡಿಡಿಪಿಐ ನಾಗರಾಜ್ ಕಾಗಲ್ಕರ್ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಡಿಡಿಪಿಐ ಕಚೇರಿಯನ್ನು ಬಂದ್ ಮಾಡಿ, ಸ್ಯಾನಿಟೈಸ್ ಮಾಡಲಾಗಿದೆ.
ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ
ಈ ನಡುವೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್ ಅವರು, ತಮ್ಮ ಸಂಪರ್ಕಕ್ಕೆ ಬಂದವರು ಕೂಡಲೇ ಕ್ವಾರಂಟೈನ್ ಆಗಿ, ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಉಪ ನೋಂದಣಾಧಿಕಾರಿ ಕಚೇರಿ ಬಂದ್‍ಗೆ ಮನವಿ
ಪತ್ರ ಬರಹಗಾರರೊಬ್ಬರು ಕರೋನಾದಿಂದ ಮೃತರಾಗಿದ್ದಾರೆ. ಈ ಹಿನ್ನಲೆಯಲ್ಲಿ ವಿನೋಬಗರದಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿಯನ್ನು ಕನಿಷ್ಠ 15 ದಿನ ಬಂದ್ ಮಾಡುವಂತೆ ಪತ್ರ ಬರಹಗಾರರು ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]