BREAKING NEWS | ಕರೋನಾಗೆ ತುತ್ತಾಗಿದ್ದ ಮಹಿಳೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020

ಕರೋನಾ ಸೋಂಕಿಗೆ ತುತ್ತಾಗಿದ್ದ ಮಹಿಳೆಯೊಬ್ಬರು ಶಿವಮೊಗ್ಗದಲ್ಲಿ ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿನ ಕುರಿತು ಆತಂಕ ಹೆಚ್ಚಾಗಿದೆ.

300420 Corona Test in Shimoga Mc Gann Hospital 1 1

ಪಕ್ಕದ ಜಿಲ್ಲೆಗೆ ಸೇರಿದವರು

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿಗೆ ಸೇರಿದ್ದ ಮಹಿಳೆಯೊಬ್ಬರು ಆರೋಗ್ಯ ಸಮಸ್ಯೆಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಕರೋನ ಲಕ್ಷಣವಿದ್ದ ಕಾರಣ ಇವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಇವತ್ತು ಬೆಳಗ್ಗೆ ಸಾವು

ಕರೋನ ಪಾಸಿಟಿವ್ ಬಂದ ಹಿನ್ನೆಲೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವತ್ತು ಬೆಳಗ್ಗೆ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕರೋನದಿಂದ ಸೋಂಕಿತರೊಬ್ಬರು ಸಾವನ್ನಪ್ಪಿದ್ದಂತಾಗಿದೆ.

ಜಿಲ್ಲಾಧಿಕಾರಿ ಹೇಳಿದ್ದೇನು?

ಬೇರೊಂದು ಜಿಲ್ಲೆಗೆ ಸೇರಿದ ವ್ಯಕ್ತಿಯೊಬ್ಬರು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದರು. ಕರೋನ ಲಕ್ಷಣ ಕಂಡುಬಂದ ಹಿನ್ನೆಲೆ ಕೋವಿಡ್ ಟೆಸ್ಟ್ ಮಾಡಿಸಿದ್ದೆವು. ಪಾಸಿಟಿವ್ ಕಾಣಿಸಿಕೊಂಡಿತ್ತು. ಇವತ್ತು ಬೆಳಗ್ಗೆ ಮಹಿಳೆ ನಿಧನರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗಕ್ಕೆ ಸೇರುತ್ತೋ? ದಾವಣಗೆರೆಗೊ?

ಮೃತ ಮಹಿಳೆ ದಾವಣಗೆರೆಯವರು. ಆದ್ದರಿಂದ ಮೃತರ ಲೆಕ್ಕವನ್ನು ದಾವಣಗೆರೆ ಜಿಲ್ಲೆಗೆ ಸೇರಿಸಲಾಗುತ್ತದೆಯೋ, ಶಿವಮೊಗ್ಗಕ್ಕೆ ಸೇರಿಸಲಾಗುತ್ತದೆಯೋ ಎಂಬ ಗೊಂದಲವಿದೆ. ಶಿವಮೊಗ್ಗದ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಹಿನ್ನೆಲೆ, ಇದನ್ನು ಶಿವಮೊಗ್ಗದ ಲೆಕ್ಕಕ್ಕೆ ಸೇರಿಸುವ ಸಾದ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : June 17, 2020 at 1:53 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜೂನ್ 17, 2020

Leave a Comment