ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020
ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ ಕಾಲೇಜುಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕರೋನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಕರೋನಾ ತಪಾಸಣಾ ಫಲಿತಾಂಶವನ್ನು ನೇರವಾಗಿ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
- ಕಾಲೇಜು ಅಥವಾ ಹಾಸ್ಟೆಲ್‍ಗೆ ಪ್ರವೇಶಿಸುವ 72 ಗಂಟೆ ಪೂರ್ವದಲ್ಲಿ ನಡೆಸಲಾದ ಆರ್‍ಟಿಪಿಸಿಆರ್ ತಪಾಸಣಾ ವರದಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕಾಗಿದೆ.
- ತಪಾಸಣಾ ವರದಿ ಐಸಿಎಂಆರ್ ಪೋರ್ಟಲ್‍ನಲ್ಲಿ ನೋಂದಣಿ ಮಾಡಲಾಗಿರುವ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ ಕಳುಹಿಸಲಾಗುತ್ತಿದೆ.
- ಇದೇ ರೀತಿ ವರದಿಯನ್ನು https://covidwar.karnataka.gov.in/service1 ವೆಬ್‍ಸೈಟ್‍ನಲ್ಲಿ ಲಾಗ್‍ಇನ್ ಆಗುವ ಮೂಲಕವೂ ಪಡೆಯಬಹುದಾಗಿದೆ.
ಆದ್ಯತೆ ಮೇರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ
ಕರೋನಾ ತಪಾಸಣಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಆರ್‍ಟಿಪಿಸಿಆರ್ ಸ್ಯಾಂಪಲ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಪರೀಕ್ಷೆ ಫಲಿತಾಂಶವನ್ನು ತಕ್ಷಣ ಐಸಿಎಂಆರ್ ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ತಿಳಿಸಿದರು.
ಮಾರ್ಗಸೂಚಿ ಪಾಲನೆ
ಎಲ್ಲಾ ಕಾಲೇಜುಗಳಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ತರಗತಿಗಳನ್ನು ನಡೆಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಸೇರಿದಂತೆ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಒಂದು ಐಸೋಲೇಶನ್ ಕೊಠಡಿ ಸಜ್ಜುಗೊಳಿಸಲಾಗಿದೆ. ಕೋವಿಡ್ ಪರೀಕ್ಷೆ ನಡೆಸಿಕೊಂಡು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಲು ಆರಂಭಿಸಿದ್ದಾರೆ. ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಯನ್ನು ಸಹ ಮುಂದುವರಿಸಲು ನಿರ್ದೇಶನ ನೀಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ.ಕೆ.ಸಿ.ವೀರಭದ್ರಯ್ಯ ಅವರು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422