ಶಿವಮೊಗ್ಗ ಹೊಸಮನೆಯಲ್ಲಿ ಮೂರು ದಿನ ಕರೋನ ಟೆಸ್ಟಿಂಗ್ ಶಿಬಿರ, ಇವತ್ತಿಂದಲೇ ತಪಾಸಣೆ ಶುರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮೂರು ದಿನದ ಕರೋನ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಬಡಾವಣೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ತಪಾಸಣಾ ಶಿಬಿರ ಮಾಡಲಾಗುತ್ತಿದೆ.

ಮಹಾನಗರ ಪಾಲಿಕೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಈ ಶಿಬಿರ ಆಯೋಜಿಸಲಾಗಿದೆ. ಹೊಸಮನೆ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಕರೋನ ಟೆಸ್ಟ್ ಮಾಡಲಾಗುತ್ತದೆ.

ಕೆಮ್ಮು, ಶೀತ, ಜ್ವರದ ಲಕ್ಷಣಗಳು ಇರುವಂತಹ ಬಡಾವಣೆಯ ನಿವಾಸಿಗಳು ಕೊರೋನ ಟೆಸ್ಟ್ ಮಾಡಿಸಿ, ಆರೋಗ್ಯ ಜಾಗೃತಿ ವಹಿಸಬೇಕೆಂದು ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ತಿಳಿಸಿದರು

ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರೀಧರ್, ಕಾಂಗ್ರೆಸ್ ಮುಖಂಡ ಕೆ.ರಂಗನಾಥ್ , ಪ್ರಾಥಮಿಕ ಆರೋಗ್ಯ ಕೇಂದ್ರದ ಮಹಿಳಾ ಸಹಾಯಕಿ ವಿಜಯಾ ಮತ್ತು  ಸಿಬ್ಬಂದಿಗಳು ಈ ವೇಳೆ ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment