ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021
ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದೆ. ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
![]() |
ಯೋಜನೆಯಡಿ ರೆಫರಲ್ ಮೂಲಕ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೋವಿಡ್ ರೋಗಿಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಉಚಿತವಾಗಿ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಒಂದೊಮ್ಮೆ ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಸರ್ಕಾರ ನಿಗದಿಪಡಿಸಿರುವ ಈ ಕೆಳಕಂಡ ಮೊತ್ತವನ್ನು ರೋಗಿಗಳೇ ನೇರವಾಗಿ ಭರಿಸಬೇಕಾಗುತ್ತದೆ. ಜನರಲ್ ವಾರ್ಡ್ 10 ಸಾವಿರ ರೂ, ಎಚ್‍ಡಿಯು 12ಸಾವಿರ ರೂ, ಐಸೊಲೇಷನ್ ಐಸಿಯು ವೆಂಟಿಲೇಟರ್ ಇಲ್ಲದೆ 15 ಸಾವಿರ ರೂ, ವಿಥ್ ವೆಂಟಿಲೇಟರ್ ರೂ. 25 ಸಾವಿರ ರೂ. ದರಗಳ ಮಿತಿ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರ ವಿಧಿಸಿದರೆ 1800 425 8330 ಗೆ ಹಾಗೂ 1912 ಕರೆ ಮಾಡಿ ದೂರು ನೀಡಬಹುದು. ಹಾಗೂ 080-22536200 ಗೆ ಕರೆ ಮಾಡಬಹುದು ಎಂದು ಅವರು ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200