ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಕಾರ್ಪೊರೇಟ್ ಕಂಪನಿಗಳೆ (Corporate Companies) ಭಾರತ ಬಿಟ್ಟು ತೊಲಗಿ, ಕೃಷಿ ಭೂಮಿ ಉಳಿಸಿ ಘೋಷಣೆಯೊಂದಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ರಾಜ್ಯ ವರಿಷ್ಠ ಕೆ.ಟಿ.ಗಂಗಾಧರ್ (K.T. Gangadhar) ಅವರ ನೇತೃತ್ವದಲ್ಲಿ ರೈತರು ಪ್ರತಿಭಟನೆ ಮಾಡಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕೃಷಿ ಕ್ಷೇತ್ರ ಭಾರತದಲ್ಲಿ ಶೇ.60ರಷ್ಟು ಉದ್ಯೋಗ ಸೃಷ್ಟಿ ಮಾಡಿದೆ. ಆದರೆ ಕಾರ್ಪೊರೇಟ್ ಕಂಪನಿಗಳು ಲಗ್ಗೆ ಇಟ್ಟು (Agriculture) ವ್ಯವಸ್ಥೆಯನ್ನು ಹಾಳುಗೆಡವುತ್ತಿವೆ. ಯಂತ್ರೋಪಕರಣ, ಅತಿಯಾದ ರಸಗೊಬ್ಬರ ಮತ್ತು ಕೀಟನಾಶಕ ಬಳಕೆ ಮಾಡುತ್ತಿವೆ. ಇದು ಈ ದೇಶದ ಕೃಷಿ ಪದ್ಧತಿಗೆ ವಿರುದ್ಧವಾದದ್ದು. ಕೃಷಿ ಉತ್ಪಾದನೆಯನ್ನು ವ್ಯಾಪಾರ ಉದ್ಯಮವಾಗಿ ನಡೆಸುವುದು ಸೇರಿದಂತೆ ಕಾರ್ಪೊರೇಟ್ ಸಂಸ್ಥೆಗಳು ಹಲವು ಸಮಸ್ಯೆ ಸೃಷ್ಟಿಸಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇದನ್ನೂ ಓದಿ-‘ರೈತರ ಮಕ್ಕಳು ವಿದ್ಯಾವಂತರಾಗುವುದು ಸಿದ್ದರಾಮಯ್ಯಗೆ ಇಷ್ಟವಿಲ್ಲʼ, ಶಿವಮೊಗ್ಗದಲ್ಲಿ ಬೀದಿಗಿಳಿದ ಬಿಜೆಪಿ, ಆಕ್ರೋಶ
ಇದೇ ವೇಳೆ ಮಾತನಾಡಿದ ರೈತ ಮುಖಂಡ ಕೆ.ಟಿ.ಗಂಗಾಧರ್, 1942ರ ಆಗಸ್ಟ್ 9ರಂದು ಗಾಂಧೀಜಿಯವರು ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ ಚಳವಳಿ ಆರಂಭಿಸಿದ್ದರು. ಇವತ್ತು ದೇಶದ ಕೃಷಿ ಪದ್ಧತಿಗೆ ಮಾರಕವಾಗಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂದು ಘೋಷಣೆಯೊಂದಿಗೆ ಹೋರಾಟ ಆರಂಭಿಸಿದ್ದೇವೆ ಎಂದು ತಿಳಿಸಿದರು.
ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ, ಗೌರವಾಧ್ಯಕ್ಷ ಈರಪ್ಪ ಪ್ಯಾಟಿ, ಜಿಲ್ಲಾಧ್ಯಕ್ಷ ಹಾಲೇಶಪ್ಪ ಗೌಡ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥೇಶ್ವರ, ಕೆ.ಎಸ್.ಪುಟ್ಟಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.