SHIVAMOGGA LIVE NEWS | 18 JANUARY 2024
SHIMOGA : ರಾಜ್ಯ ಸರ್ಕಾರ ಯಾವುದೆ ಕ್ಷಣದಲ್ಲಿ ನಿಗಮ, ಮಂಡಳ ನೇಮಕಾತಿ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಿಗೆ ಶಿವಮೊಗ್ಗ ಜಿಲ್ಲೆಯ ಐವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಪಕ್ಕಾ ಆಗಿದೆ ಎಂದು ಅಭಿನಂದನೆ ಸಲ್ಲಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲು ಇವರ ಫೋಟೊಗಳು ಹರಿದಾಡುತ್ತಿವೆ.
ಕುತೂಹಲ ಮೂಡಿಸಿದ್ದ ನೇಮಕಾತಿ
ಸಚಿವ ಸ್ಥಾನ ವಂಚಿತ ಶಾಸಕರು, ಪ್ರಮುಖ ಕಾರ್ಯಕರ್ತರು ನಿಗಮ, ಮಂಡಳಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಸರ್ಕಾರ ರಚನೆಯಾದಾಗಿನಿಂದ ಪಕ್ಷದ ಮುಖಂಡರ ಮೇಲೆ ಒತ್ತಡ ಹೇರುತ್ತಿದ್ದರು. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ನಿಗಮ, ಮಂಡಳಿಗೆ ನೇಮಕ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೆ ಕ್ಷಣದಲ್ಲಿ ಪಟ್ಟಿ ಪ್ರಕಟವಾಗುವ ಸಂಭವವಿದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿಕೆಯನ್ನು ನೀಡಿದ್ದಾರೆ.
ಈ ಸೆಕೆಂಡ್‌ನಲ್ಲಿಯೇ ನಿಗಮ, ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ಆಗಲಿದೆ. 36 ಶಾಸಕರು, 39 ಕಾರ್ಯಕರ್ತರ ಹೆಸರನ್ನು ಪ್ರಕಟಿಸಲಾಗುವುದು. ನಿನ್ನೆಯೂ ಹೇಳಿದ್ದೆ, ಇವತ್ತೂ ಅದನ್ನೇ ಹೇಳುತ್ತಿದ್ದೇನೆ. ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು.ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ
ಶಿವಮೊಗ್ಗದಲ್ಲಿ ಐವರ ಹೆಸರು ಮುನ್ನಲೆಗೆ
ಈ ಬೆಳವಣಿಗೆ ಬೆನ್ನಿಗೆ ಶಿವಮೊಗ್ಗ ಜಿಲ್ಲೆಯ ಐವರ ಹೆಸರು ಮುನ್ನಲೆಗೆ ಬಂದಿದೆ. ಶಾಸಕರಾದ ಬಿ.ಕೆ.ಸಂಗಮೇಶ್ವರ ಮತ್ತು ಬೇಳೂರು ಗೋಪಾಲಕೃಷ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ನಾಯಕಿ ಪಲ್ಲವಿ ಅವರನ್ನು ನಿಗಮ, ಮಂಡಳಿಗೆ ನೇಮಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅವರ ಬೆಂಬಲಿಗರು ಫೇಸ್‌ಬುಕ್, ವಾಟ್ಸಪ್‌ನಲ್ಲಿ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಸ್ಥಾನ ವಂಚಿತರಿಗೆ ತಳಮಳ
ಇತ್ತ ನಿಗಮ, ಮಂಡಳಿ ಮೇಲೆ ಕಣ್ಣಿಟ್ಟಿದ್ದ ಇತರೆ ನಾಯಕರಲ್ಲಿ ತಳಮಳ ಶುರುವಾಗಿದೆ. ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೋ ಇಲ್ಲವೊ ಎಂದು ಖಚಿತಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಸದ್ಯ, ರಾಜ್ಯ ಕಾಂಗ್ರೆಸ್‌ನಲ್ಲಿ ನಿಗಮ, ಮಂಡಳಿ ನೇಮಕಾತಿ ವಿಚಾರ ತೀವ್ರ ಕುತೂಹಲ ಮೂಡಿಸಿದೆ.
ಇದನ್ನೂ ಓದಿ – SHIMOGA CITY – ಇವತ್ತಿನ ಟಾಪ್ 10 ಸುದ್ದಿಗಳು | 18 ಜನವರಿ 2024
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200