ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ವಿವಿಧ ರಸ್ತೆಗಳಲ್ಲಿ ಸವಾರರ ಪಾಲಿಗೆ ಕಂಟಕವಾಗಿದ್ದ ಅವೈಜ್ಞಾನಿಕ ಹಂಪ್‌ಗಳ (road humps) ಕುರಿತು ಶಿವಮೊಗ್ಗ ಲೈವ್.ಕಾಂ ಸರಣಿ ವರದಿಗಳನ್ನು ಪ್ರಕಟಿಸಿತ್ತು. ಈ ವರದಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣಗೌಡ ಅವರು, ಕೂಡಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಈ ಕುರಿತು ವಾಟ್ಸಾಪ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಕಮಿಷನರ್ ಏನೆಲ್ಲ ಹೇಳಿದರು?
1ನಗರದಲ್ಲಿ ಅವೈಜ್ಞಾನಿಕವಾಗಿ ಹಂಪ್‌ಗಳನ್ನು ನಿರ್ಮಿಸಿರುವುದು ಮತ್ತು ಅವುಗಳಿಂದ ಅಪಘಾತಗಳು ಸಂಭವಿಸುತ್ತಿರುವುದು ಸತ್ಯ ಎಂದು ಕಮಿಷನರ್ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ಸಮರೋಪಾದಿಯಲ್ಲಿ ಕ್ಷೇತ್ರೀಯ ಪರಿಶೀಲನೆ ಹಾಗೂ ತಪಾಸಣೆ ನಡೆಸಲಾಗುತ್ತದೆ.


ಮಧ್ಯಾಹ್ನ ತುರ್ತು ಮೀಟಿಂಗ್
ಇನ್ನು, ಶಿವಮೊಗ್ಗ ನಗರದ ವಿವಿಧೆಡೆ ಹಂಪ್‌ಗಳಿಂದ ಆಗುತ್ತಿರುವ ಅವಘಡಗಳ ಕುರಿತು ಚರ್ಚಿಸಲು ಮಹಾನಗರ ಪಾಲಿಕೆಯಲ್ಲಿ ತುರ್ತು ಸಭೆ ಆಯೋಜಿಸಲಾಗಿದೆ. ಪಾಲಿಕೆ ಅಧಿಕಾರಿಗಳು, ಸಂಚಾರ ಪೊಲೀಸರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆ ಬಳಿಕ ಇಂದು ಸಂಜೆ ವೇಳೆಗೆ ನಗರದ ವಿವಿಧೆಡೆ ಹಂಪ್‌ಗಳ ತೆರವು ಕಾರ್ಯಾಚರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





