ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಾನಗರ ಪಾಲಿಕೆ ಕಾರ್ಪೊರೇಟರ್‍ಗಳು, ಕಮಿಷನರ್ ಅವರೊಂದಿಗೆ ಶಿವಮೊಗ್ಗದಲ್ಲಿ ಚರ್ಚೆ ನಡೆಸಿದರು. ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು.
ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯಬೇಕಿರುವ ವಿವಿಧ ಕಾಮಗಾರಿಗಳು ಮತ್ತು ಅನುದಾನದ ಕುರಿತು ಸಿಎಂ ಜೊತೆ ಶಿವಮೊಗ್ಗದ ಕಾರ್ಪೊರೇಟರ್‍ಗಳು ಚರ್ಚೆ ನಡೆಸಿದರು. ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಅವರು ಕಾಮಗಾರಿಗಳು, ಪಾಲಿಕೆ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಗಾಂಧಿ ಪಾರ್ಕ್ ಡಿಸಿ ಉಸ್ತುವಾರಿಗೆ
ಸಭೆಯಲ್ಲಿ ಗಾಂಧಿ ಪಾರ್ಕ್ ಕುರಿತು ಪ್ರಸ್ತಾಪವಾಯಿತು. ಈ ವೇಳೆ ಗಾಂಧಿ ಪಾರ್ಕ್ ಅವ್ಯವಸ್ಥೆ ಕೇಳಿ ಸಿಎಂ ಸಿಡಿಮಿಡಿಗೊಂಡರು. ಜಿಲ್ಲಾಧಿಕಾರಿ ಅವರು ಈ ಬಗ್ಗೆ ಗಮನ ಹರಿಸಬೇಕು. ಗಾಂಧಿ ಪಾರ್ಕ್ ಅಭಿವೃದ್ಧಿ ಮಾಡಬೇಕು ಎಂದು ಆದೇಶಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಪಾಲಿಕೆ ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಕಮಿಷನರ್ ಚಿದಾನಂದ ವಟಾರೆ, ಪಾಲಿಕೆ ಕಾರ್ಪೊರೇಟರ್‍ಗಳು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422