ಶಿವಮೊಗ್ಗ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನೀರಿಗಾಗಿ ಗದ್ದಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟಂಬರ್ 2020

ಕುಡಿಯುವ ನೀರು ಪೂರೈಕೆ ವಿಚಾರವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ತೀವ್ರ ಗದ್ದಲ ನಿರ್ಮಾಣಾಯಿತು. ಆಡಳಿತ ಮತ್ತು ಪ್ರತಿಪಕ್ಷದ ಮುಖಂಡರ ನಡುವೆ ವಾಗ್ವಾದ ನಡೆಯಿತು.

ಕಾಂಗ್ರೆಸ್ ಕಾರ್ಪೊರೇಟರ್‍ಗಳಾದ ಯಮುನಾ ರಂಗೇಗೌಡ, ರೇಖಾ ರಂಗನಾಥ್ ಮತ್ತು ಮೆಹಕ್ ಷರೀಫ್ ಅವರು ತಮ್ಮ ವಾರ್ಡ್‍ನಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು. ಅಲ್ಲದೆ ನೀರಿನ ಸಮಸ್ಯೆ ಬಗೆಹರಿಸದ ಆಡಳಿತ ವ್ಯವಸ್ಥೆಗೆ ಧಿಕ್ಕಾರ ಎಂದು ಬರೆದಿರುವ ಫ್ಲೇಕರ್‍ಗಳನ್ನು ಹಿಡಿದು, ಮೇಯರ್ ಟೇಬಲ್ ಮುಂಭಾಗ ಘೋಷಣೆ ಕೂಗಿದರು.

ಮಾತಿಗೆ ಮಾತು, ‘ಮರ್ಯಾದೆ’ಯ ಎಚ್ಚರಿಕೆ

ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಸಮಸ್ಯೆಯಾಗುತ್ತಿದೆ. ಅಧಿಕಾರಿಗಳಿಗೆ ಕರೆ ಮಾಡಿದರೆ ನೀರು ಪೂರೈಕೆ ಮಾಡಲಾಗುತ್ತದೆ ಅನ್ನುತ್ತಾರೆ. ಅದರೆ ಟ್ಯಾಂಕ್‍ಗೆ ನೀರು ಸರಿಯಾಗಿ ಭರ್ತಿಯಾಗುತ್ತಿಲ್ಲ. ಸಾಮಾನ್ಯ ಸಭೆಗಳಿದ್ದಾಗಷ್ಟೇ ಟ್ಯಾಂಕ್‍ಗೆ ನೀರು ತುಂಬಿಸಲಾಗುತ್ತಿದೆ ಎಂದು ಯಮುನಾ ರಂಗೇಗೌಡ ಆರೋಪಿಸಿದರು.

ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷದ ಕಾರ್ಪೊರೇಟರ್‍ಗಳ ನಡುವೆ ಮಾತಿಗೆ ಮಾತು ಬೆಳೆಯಿತು. ಒಂದು ಹಂತದಲ್ಲಿ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ಅವರು ತಮ್ಮೊಂದಿಗೆ ಮರ್ಯಾದೆಯಿಂದ ಮಾತಾಡಬೇಕು ಎಂದು ಯಮುನಾ ರಂಗೇಗೌಡ ಅವರಿಗೆ ಸೂಚಿಸಿದರು. ಈ ವೇಳೆ ಗಲಾಟೆ ಮತ್ತಷ್ಟು ಜೋರಾಯಿತು.

ವಿರೋಧ ಪಕ್ಷದ ನಾಯಕ ಹೆಚ್‍.ಸಿ.ಯೋಗೇಶ್ ಅವರು ವಿರೋಧ ಪಕ್ಷದ ಕಾರ್ಪೊರೇಟರ್‍ಗಳ ಮಾತು ಆಲಿಸಿ ಸಮಸ್ಯೆ ಬಗೆಹರಿಸಿ ಎಂದರು.

ನಾಳೆಯೆ ಪರಿಶೀಲನೆ ಮಾಡೋಣ

ಈ ನಡುವೆ ಅಧಿಕಾರಿಗಳಿಂದ ಮಾಹಿತಿ ಪಡೆದ ಮೇಯರ್, ಬಳಿಕ ತಮ್ಮ ವಾರ್ಡ್‍ಗಳಿಗೆ ಭೇಟಿ ನೀಡಿವುದಾಗಿ ಭರವಸೆ ನೀಡಿದರು. ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಮೇಯರ್ ಸುವರ್ಣ ಶಂಕರ್ ಭರವಸೆ ನೀಡಿದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 19, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment