ಶಿವಮೊಗ್ಗದಲ್ಲಿ ಒಂದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಮೇಲೆ ಎಸಿಬಿ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | CORRUPTION | 2 ಜೂನ್ 2022

ಒಂದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಯನ್ನು ಬಂಧಿಸಲಾಗಿದ್ದು, ಶಿವಮೊಗ್ಗದ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಲೀಮಾ, ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ಏನಿದು ಪ್ರಕರಣ?

ವಿನೋಬನಗರದ ನಿವಾಸಿಯೊಬ್ಬರು ದಿನಸಿ ಅಂಗಡಿ ನಡೆಸಲು ನೋಂದಣಿಗಾಗಿ ಶಿವಮೊಗ್ಗದ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ನೋಂದಣಿ ಮಾಡಿಕೊಡಲು ಒಂದು ಸಾವಿರ ರೂ. ಲಂಚ ನೀಡುವಂತೆ ಪ್ರಥಮ ದರ್ಜೆ ಸಹಾಯಕಿ ಲೀಮಾ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ಎಸಿಬಿ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಒಂದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಥಮ ದರ್ಜೆ ಸಹಾಯಕಿ ಲೀಮಾಳನ್ನು ಬಂಧಿಸಲಾಗಿದೆ. ಲಂಚದ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ದಾಖಲು ಮಾಡಲಾಗಿದೆ.

Shimoga Nanjappa Hospital

ಇದನ್ನೂ ಓದಿ – ಐದು ವರ್ಷದಿಂದ ಮನೆ ಮುಂದೆ ಕೆಟ್ಟು ನಿಂತಿದ್ದ ಬೈಕ್ ಕಳ್ಳತನ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2022

Leave a Comment