ಶಿವಮೊಗ್ಗ ಲೈವ್
ಶಿವಮೊಗ್ಗ: ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ದಿಢೀರ್ ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಬಳಸುತ್ತಿದ್ದವರ ವಿರುದ್ಧ ಒಟ್ಟು 14 ಪ್ರಕರಣಗಳನ್ನು ದಾಖಲಿಸಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಗರದ ಮೀನಾಕ್ಷಿ ಭವನ ಸುತ್ತಲಿನ ಪ್ರದೇಶದಲ್ಲಿ ಇಂದು ಕಾರ್ಯಾಚರಣೆ ನಡೆಸಲಾಯಿತು. ನಿಯಮ ಉಲ್ಲಂಘಿಸಿದವರಿಂದ ಒಟ್ಟು ₹2700 ದಂಡ ಸಂಗ್ರಹಿಸಲಾಗಿದೆ. ಇದೇ ವೇಳೆ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳ ಹಾಗೂ ಕೋಟ್ಪಾ ಕಾಯ್ದೆ ಬಗ್ಗೆ ಅರಿವು ಮೂಡಿಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆಯಿತು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇದ್ದರು.
ಈ ಸುದ್ದಿಯನ್ನೂ ಓದಿ
ಆಟೋ ಕಾಂಪ್ಲೆಕ್ಸ್ನ ಗ್ಯಾರೇಜ್ ಮೇಲೆ ಅಧಿಕಾರಿಗಳಿಂದ ದಿಢೀರ್ ದಾಳಿ