ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020
ತೀವ್ರ ಕುತೂಹಲ ಕೆರಳಿಸಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಪಾಸ್ ಇದ್ದವರಿಗಷ್ಟೇ ಮತ ಎಣಿಕೆ ಕೇಂದ್ರದ ಒಳಗೆ ಬಿಡಲಾಗಿದೆ. ಇನ್ನು, ಮತ ಎಣಿಕೆ ಕೇಂದ್ರದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪಾಸ್ ಇರಬೇಕು, ಮೊಬೈಲ್ ಇರಬಾರದು
ಶಿವಮೊಗ್ಗ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕಾಲೇಜು ಆವರಣದೊಳಗೆ ಪ್ರವೇಶಿಸಲು ಪಾಸ್ ಕಡ್ಡಾಯಗೊಳಿಸಲಾಗಿದೆ. ಮತ ಎಣಿಕೆ ಸಿಬ್ಬಂದಿಗಳಿಗೆ ಪ್ರತ್ಯೇಕ ಐಡಿ ಕಾರ್ಡ್ ವಿತರಿಸಲಾಗಿದೆ. ಇನ್ನು ಚುನಾವಣಾ ಅಭ್ಯರ್ಥಿಗಳು, ಏಜೆಂಟ್‍ಗಳಿಗೆ ಪ್ರತ್ಯೇಕ ಪಾಸ್ ನೀಡಲಾಗಿದೆ. ಈ ಪಾಸ್ ಇದ್ದವರಿಗಷ್ಟೇ ಎಣಿಕೆ ಕೇಂದ್ರದ ಒಳಗೆ ಬಿಡಲಾಗುತ್ತಿದೆ. ಆದರೆ ಮೊಬೈಲ್ ಕೊಂಡೊಯ್ಯಲು ನಿರ್ಬಂರ್ಧ ಇದೆ.
ಎಣಿಕೆ ಶುರು, ಅಧಿಕಾರಿಗಳ ಪರಿಶೀಲನೆ
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಎಣಿಕೆ ಕೊಠಡಿಯೊಳಗೆ ಸಿಬ್ಬಂದಿಗಳು, ಆಯಾ ಗ್ರಾಮ ಪಂಚಾಯಿತಿಯ ಅಭ್ಯರ್ಥಿ ಪರವಾದ ಏಜೆಂಟ್‍ಗಳಿಗೆ ಮಾತ್ರ ಪ್ರವೇಶವಿದೆ. ಆದರೆ ಎಣಿಕೆ ಟೇಬಲ್ ಬಳಿಗೆ ಏಜೆಂಟ್‍ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಏಜೆಂಟ್‍ಗಳು ಬ್ಯಾರಿಕೇಡ್‍ನಿಂದ ಹೊರಗೆ ಕುಳಿತು ಮತ ಎಣಿಕೆಯನ್ನು ವೀಕ್ಷಿಸಬಹುದಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422