BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ, ಯಾಕೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು (Innova Car) ಜಪ್ತಿ (seizure) ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ ಒಂದು ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ ₹22 ಲಕ್ಷ ಪರಿಹಾರ ನೀಡವುದಾಗಿ ತಿಳಿಸಿದ್ದ ಸರ್ಕಾರ ಕೇವಲ ₹9 ಲಕ್ಷ ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್‌ (Shiomga Court) ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಎರಡನೇ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ₹95,88,283 ಪರಿಹಾರವನ್ನು ಪಾವತಿಸುವಂತೆ ಸೂಚಿಸಿತ್ತು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

Shimoga-DC-Car.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

ನ್ಯಾಯಾಲಯದ ಆದೇಶವಾಗಿದ್ದರು ಪರಿಹಾರ ನೀಡದ ಹಿನ್ನೆಲೆ ಜಿಲ್ಲಾಧಿಕಾರಿ ಬಳುತ್ತಿರುವ KA 14 G 1234 ನಂಬರ್‌ನ ಕಾರು ಜಪ್ತಿ ಮಾಡುವಂತೆ ಶಿವಮೊಗ್ಗದ ಎರಡನೆ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

Leave a Comment