SHIMOGA NEWS, 17 SEPTEMBER 2024 : ರಸ್ತೆ ಅಭಿವೃದ್ಧಿಗಾಗಿ ವ್ಯಕ್ತಿಯೊಬ್ಬರ ಭೂಮಿ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿ (Confiscate) ಮಾಡುವಂತೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
» ಏನಿದು ಪ್ರಕರಣ?
ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಅಗಡಿ ಆಶೋಕ್ ಎಂಬುವರಿಗೆ ಸೇರಿದ ನಿವೇಶನದ ಸ್ವಲ್ಪ ಭಾಗವನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಕೆ-ಶಿಪ್) 2011ರಲ್ಲಿ ವಶಪಡಿಸಿಕೊಂಡಿತ್ತು. ನಿವೇಶನಕ್ಕೆ ಸಂಬಂಧಿಸಿ ಕಾನೂನುಬದ್ಧವಾಗಿ ಪರಿಹಾರ ನೀಡಿಲ್ಲ ಎಂದು ನಿವೇಶನದ ಮಾಲೀಕ ಅಗಡಿ ಅಶೋಕ್ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಹೈಕೋರ್ಟ್ ನಿರ್ದೇಶನದಂತೆ ಅಗಡಿ ಅಶೋಕ್ ಅವರಿಗೆ ಮೂರು ತಿಂಗಳ ಒಳಗೆ 3.93 ಕೋಟಿ ರೂ. ಸೇರಿ ಒಟ್ಟು 4.44 ಕೋಟಿ ರೂ. ಪರಿಹಾರ ನೀಡುವಂತೆ ಸೂಚಿಸಲಾಗಿತ್ತು.
ಪರಿಹಾರ ವಿಳಂಬ, ಚರಾಸ್ತಿ ಜಪ್ತಿಗೆ ಆದೇಶ
ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನೆಲೆ ಜಿಲ್ಲಾ ನ್ಯಾಯಾಲಯವು ಜಿಲ್ಲಾಧಿಕಾರಿ ಕಚೇರಿಯ ಚರಾಸ್ತಿಯಾದ ಪೀಠೋಪಕರಣ ಜಪ್ತಿ ಮಾಡಬೇಕು. ಮುಂದಿನ ಆದೇಶದವರೆಗೆ ವಶಕ್ಕೆ ಪಡೆಯುವಂತೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ದೂರುದಾರರ ಪರವಾಗಿ ಸೊರಬ ವಕೀಲ ಪಿ.ವಿ.ಖರೆ ಹಾಗೂ ದಿನಕರ್ ಭಟ್ ಭಾವೆ ವಾದ ಮಂಡಿಸಿದ್ದರು.
ಇದನ್ನೂ ಓದಿ » ದಿಢೀರ್ ಬಲಕ್ಕೆ ತಿರುಗಿದ ಲಾರಿ, ಬೈಕ್ ಸವಾರ ಮೆಗ್ಗಾನ್ಗೆ ದಾಖಲು – 3 ಫಟಾಫಟ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200