ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 17 SEPTEMBER 2024 : ರಸ್ತೆ ಅಭಿವೃದ್ಧಿಗಾಗಿ ವ್ಯಕ್ತಿಯೊಬ್ಬರ ಭೂಮಿ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿ (Confiscate) ಮಾಡುವಂತೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಅಗಡಿ ಆಶೋಕ್ ಎಂಬುವರಿಗೆ ಸೇರಿದ ನಿವೇಶನದ ಸ್ವಲ್ಪ ಭಾಗವನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಕೆ-ಶಿಪ್) 2011ರಲ್ಲಿ ವಶಪಡಿಸಿಕೊಂಡಿತ್ತು. ನಿವೇಶನಕ್ಕೆ ಸಂಬಂಧಿಸಿ ಕಾನೂನುಬದ್ಧವಾಗಿ ಪರಿಹಾರ ನೀಡಿಲ್ಲ ಎಂದು ನಿವೇಶನದ ಮಾಲೀಕ ಅಗಡಿ ಅಶೋಕ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೈಕೋರ್ಟ್ ನಿರ್ದೇಶನದಂತೆ ಅಗಡಿ ಅಶೋಕ್ ಅವರಿಗೆ ಮೂರು ತಿಂಗಳ ಒಳಗೆ 3.93 ಕೋಟಿ ರೂ. ಸೇರಿ ಒಟ್ಟು 4.44 ಕೋಟಿ ರೂ. ಪರಿಹಾರ ನೀಡುವಂತೆ ಸೂಚಿಸಲಾಗಿತ್ತು.» ಏನಿದು ಪ್ರಕರಣ?
ಪರಿಹಾರ ವಿಳಂಬ, ಚರಾಸ್ತಿ ಜಪ್ತಿಗೆ ಆದೇಶ
ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನೆಲೆ ಜಿಲ್ಲಾ ನ್ಯಾಯಾಲಯವು ಜಿಲ್ಲಾಧಿಕಾರಿ ಕಚೇರಿಯ ಚರಾಸ್ತಿಯಾದ ಪೀಠೋಪಕರಣ ಜಪ್ತಿ ಮಾಡಬೇಕು. ಮುಂದಿನ ಆದೇಶದವರೆಗೆ ವಶಕ್ಕೆ ಪಡೆಯುವಂತೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ದೂರುದಾರರ ಪರವಾಗಿ ಸೊರಬ ವಕೀಲ ಪಿ.ವಿ.ಖರೆ ಹಾಗೂ ದಿನಕರ್ ಭಟ್ ಭಾವೆ ವಾದ ಮಂಡಿಸಿದ್ದರು.
ಇದನ್ನೂ ಓದಿ » ದಿಢೀರ್ ಬಲಕ್ಕೆ ತಿರುಗಿದ ಲಾರಿ, ಬೈಕ್ ಸವಾರ ಮೆಗ್ಗಾನ್‌ಗೆ ದಾಖಲು – 3 ಫಟಾಫಟ್ ನ್ಯೂಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422