ಮಾನಹಾನಿ ಸುದ್ದಿ ಪ್ರಕಟಣೆಗೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್‌, ಕುತೂಹಲ ಮೂಡಿಸಿದ ಬೆಳವಣಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 MAY 2024

ELECTION NEWS : ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕುರಿತು ಚರ್ಚೆ ಜೋರಾಗಿದೆ. ಈ ಮಧ್ಯೆ ಶಿವಮೊಗ್ಗ ಲೋಕಸಭೆ ಚುನಾವಣೆಯ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್‌, ತಮ್ಮ ವಿರುದ್ಧ ಮಾಧ್ಯಮಗಳು ಮಾನಹಾನಿ ವರದಿ ಪ್ರಕಟಿಸದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.

50 ಮಾಧ್ಯಮಗಳ ಹೆಸರು

ಕೆ.ಇ.ಕಾಂತೇಶ್‌ ಅವರು ತಮ್ಮ ವಿರುದ್ಧ ದೃಶ್ಯ, ಪತ್ರಿಕೆ ಮತ್ತು ಡಿಜಿಟಲ್‌ ಮಾಧ್ಯಮದಲ್ಲಿ ಮಾನಹಾನಿಕರ ಸುದ್ದಿ, ಫೋಟೊ ಪ್ರಕಟಿಸದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ. 50 ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿ ಮಾಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ನ ನ್ಯಾಯಾಧೀಶರು, ಕೆ.ಇ.ಕಾಂತೇಶ್‌ ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ಏಪ್ರಿಲ್‌ 27ರಂದು ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿದ್ದಾರೆ.

ಕಾಂತೇಶ್‌ ಅವರ ಅರ್ಜಿಯ ವಿಚಾರಣೆಯನ್ನು ಆಗಸ್ಟ್‌ 3ಕ್ಕೆ ಮುಂದೂಡಿಕೆ ಮಾಡಲಾಗಿದೆ. ಸದ್ಯ ಈ ಬೆಳವಣಿಗೆ ಶಿವಮೊಗ್ಗ ರಾಜಕಾರಣ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಚರ್ಚೆಗು ಕಾರಣವಾಗಿದೆ.

ಇದನ್ನೂ ಓದಿ – ಈ‍ಶ್ವರಪ್ಪಗೆ ಬೆಂಬಲ ಘೋಷಿಸಿದ ಕಾಂಗ್ರೆಸ್‌ ಮಾಜಿ ಜಿಲ್ಲಾಧ್ಯಕ್ಷ, ರಾಯಣ್ಣ ಬ್ರಿಗೇಡ್‌ ಸ್ಮರಿಸಿದ ಈಶ್ವರಪ್ಪ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment