ಶಿವಮೊಗ್ಗಕ್ಕೆ ಬಂತು ಕೋವಿಡ್‌ ಲಸಿಕೆ, ಆರೋಗ್ಯ ಇಲಾಖೆಯಿಂದ ಮಹತ್ವದ ಪ್ರಕಟಣೆ

SHIVAMOGGA LIVE NEWS | 3 JANUARY 2023

SHIMOGA : ವಿವಿಧೆಡೆ ಕೋವಿಡ್‌ 19 ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲಾಗುತ್ತಿದೆ. ಫಲಾನುಭವಿಗಳು ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದಾಗಿದೆ ಎಂದ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಯಾರೆಲ್ಲ ಲಸಿಕೆ ಪಡೆಯಬಹುದು?

ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ ಆರೋಗ್ಯ ಕಾರ್ಯಕರ್ತೆಯರು ಲಸಿಕೆ ಪಡೆಯಬಹುದಾಗಿದೆ. ಜಿಲ್ಲೆಗೆ 820 ಡೋಸ್ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಸರಬರಾಜಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Kalleshwara-Enterprises.webp

ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ವಿಜಾತಿ(ಹೆಟೆರೊಲಾಗಸ್)ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿದೆ. ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ಡೋಸ್ ಲಸಿಕೆ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಕೆ ಡೋಸ್ ಲಸಿಕಾಕರಣಕ್ಕೆ ಬಾಕಿ ಇರುವ ಫಲಾನುಭವಿಗಳು ಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಹಾಗೂ ಆರ್‌ಸಿಹೆಚ್ ಅಧಿಕಾರಿ ಡಾ.ನಾಗರಾಜ್‍ನಾಯ್ಕ್ ತಿಳಿಸಿದ್ದಾರೆ.

ಇದನ್ನೂ ಓದಿ – ಹೊಸ ವರ್ಷ, ಶಿವಮೊಗ್ಗದ ಜಿಮ್‌ಗಳು, ಯೋಗ ತರಬೇತಿ ಕೇಂದ್ರಗಳಿಗೆ ಅಡ್ಮಿಷನ್‌ ಹೆಚ್ಚಳ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment