ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022
ಜಿಲ್ಲೆಯಾದ್ಯಂತ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದೆ. ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು..
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೋವಿಡ್-19 ಬೂಸ್ಟರ್‌ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯಾರೆಲ್ಲ ಬೂಸ್ಟರ್ ಡೋಸ್ ಪಡೆಯಬಹುದು?
ಆರ್‌ಸಿಹೆಚ್‌ಓ ಡಾ.ನಾಗರಾಜನಾಯ್ಕ ಮಾತನಾಡಿ, ಈಗಾಗಲೇ ಲಸಿಕೆ ಪಡೆದಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಕೋವಿಡ್ ಪೋರ್ಟಲ್‌ನಲ್ಲಿ ನೊಂದಾಯಿಸಿದಂತೆ 2ನೇ ಡೋಸ್ ಪಡೆದ 9 ತಿಂಗಳ ನಂತರ ಬೂಸ್ಟರ್ ಡೋಸ್ ಪಡೆಯಲು ಅರ್ಹರಿರುತ್ತಾರೆ ಎಂದರು.
ಈ ಫಲಾನುಭವಿಗಳು ಈ ಮುಂಚೆ ಮೊದಲ ಹಾಗೂ ಎರಡನೇ ಡೋಸ್ ಕೋವಿಶೀಲ್ಡ್ ಪಡೆದಿದ್ದಲ್ಲಿ ಈಗ ಬೂಸ್ಟರ್ ಡೋಸ್ ಕೂಡ ಕಡ್ಡಾಯವಾಗಿ ಕೋವಿಶೀಲ್ಡ್‌ನ್ನೇ ಪಡೆದುಕೊಳ್ಳಬೇಕು. ಮುಂಚೆ ಕೋವ್ಯಾಕ್ಸಿನ್ ಪಡೆದಿದ್ದಲ್ಲಿ ಬೂಸ್ಟರ್ ಡೋಸ್ ಕೂಡ ಕಡ್ಡಾಯವಾಗಿ ಕೋವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದರು.
ಬೂಸ್ಟರ್ ಡೋಸ್‌ಗಾಗಿ ಯಾವುದೇ ಹೊಸ ಫಲಾನುಭವಿಗಳನ್ನು ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸುವಂತಿಲ್ಲ. ಜಿಲ್ಲೆಯ ಎಲ್ಲ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕಾಕರಣ ನಡೆಸಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್, ಮಹಾನಗರಪಾಲಿಕೆ ಮಹೌಪೌರರಾದ ಸುನೀತಾ ಅಣ್ಣಪ್ಪ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಇತರರು ಹಾಜರಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422