ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 APRIL 2021
ಕೋವಿಡ್ ನಿಯಂತ್ರಣ ಹಿನ್ನೆಲೆ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರಂತೆ ಬೆಳಿಗ್ಗೆ 6 ರಿಂದ ರಾತ್ರಿ 9ರವರೆಗೆ ಅಗತ್ಯ ವಸ್ತುಗಳ ಮಾರಾಟ ಮಳಿಗೆಗಳನ್ನು ಮಾತ್ರೆ ತೆರೆಯಲು ಅವಕಾಶವಿರಲಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು, ಕಟ್ಟಡ ನಿರ್ಮಾಣ ಸಾಮಾಗ್ರಿ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳನ್ನು ನಿರ್ಬಂಧಿಸಲಾಗುವುದು ಎಂದರು.
ಕೃಷಿ ಚಟುವಟಿಕೆಗೆ ನಿರ್ಬಂಧವಿಲ್ಲ
ಮೈದಾನ ಇಲ್ಲವೇ ತೆರೆದ ಪ್ರದೇಶದಲ್ಲಿ ಮಾತ್ರ ಸಗಟು ತರಕಾರಿ, ಹಣ್ಣು, ಹೂ ವ್ಯಾಪಾರ ನಡೆಸಲು ಅನುಮತಿ ಇದೆ. ಮುಂಗಾರು ಕೃಷಿ ಪೂರ್ವ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ. ಎಲ್ಲಾ ರೀತಿಯ ಕೈಗಾರಿಕೆ, ಸಂಸ್ಥೆಗಳು ಕಾರ್ಯನಿರ್ವಹಿಸಬಹುದು. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವವರಿಗೆ ಅಧಿಕೃತವಾದ ಐಡಿ ಕಾರ್ಡ್ ನೀಡಿರಬೇಕು. ಮದುವೆ ಸಮಾರಂಭಗಳಿಗೆ ತಹಶೀಲ್ದಾರ್ ಕಚೇರಿಯಿಂದ ಅನುಮತಿ ಪಡೆದು ಗರಿಷ್ಟ 50ಮಂದಿ ಮೀರದಂತೆ ನಿರ್ವಹಿಸಬೇಕು. ರಾಜ್ಯದೊಳಗೆ ವ್ಯಕ್ತಿಗಳ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಮುಕ್ತ ಅವಕಾಶವಿದೆ ಎಂದು ಹೇಳಿದರು.
ವಾರಾಂತ್ಯದ ಕರ್ಫ್ಯೂಗೆ ಸಿದ್ಧತೆ
ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಸಂಪೂರ್ಣ ಕರ್ಫ್ಯೂ ಇರಲಿದ್ದು, ಈ ಅವಧಿಯಲ್ಲಿ ಬೆಳಿಗ್ಗೆ 6ರಿಂದ 10ರವರೆಗೆ ದಿನಸಿ, ತರಕಾರಿ ಹಾಲು ಅಂಗಡಿಗಳು ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ತೆರೆದಿರುತ್ತದೆ. ಮೇ 4ರವರೆಗೆ ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದರು.
VIDEO NEWS
ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422