ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಜನವರಿ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲೆಯಲ್ಲಿ ಕೊರೋನ ನಿಯಂತ್ರಣ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು.
ಈ ವೇಳೆ ಶಾಲೆಗಳಿಗೆ ರಜೆ ನೀಡುವ ಸಂಬಂಧ ಮಹತ್ವದ ಚರ್ಚೆ ನಡೆಯಿತು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ನಿರ್ಣಯಗಳನ್ನು ತಿಳಿಸಿದರು.
ಏನೆಲ್ಲ ನಿರ್ಣಯ ಕೈಗೊಳ್ಳಲಾಯಿತು?
♦ ‘ಕೋವಿಡ್ ರೂಪಾಂತರಿ ವೈರಸ್ ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ ಎಂಬ ಅಭಿಪ್ರಾಯವಿಲ್ಲ. ಶಾಲೆಗಳಿಗೆ ಮೂರು ದಿನ ರಜೆ ಘೋಷಣೆ ಮಾಡಿದ್ದರಿಂದ ಸೋಂಕು ಹರಡುವುದು ನಿಯಂತ್ರಣದಲ್ಲಿದೆ.’
♦ ‘ಮಕ್ಕಳಿಗೆ ಸೋಂಕು ಹರಡುವುದನ್ನು ತಡೆಯಲು ಶಿವಮೊಗ್ಗ ನಗರದ ಶಾಲೆಗಳಿಗೆ ಮೂರು ದಿನ ರಜೆ ಘೋಷಿಸಲಾಗಿತ್ತು. ಸೋಮವಾರದಿಂದ ಶಾಲೆಗಳು ಪುನಾರಂಭವಾಗಲಿವೆ. ಆದರೆ ಕೆಲವು ಶಾಲೆಗಳಿಗೆ ರಜೆ ಅಗತ್ಯವಿದೆ ಎಂದು ತಿಲಿಸಿದ್ದಾರೆ. ಅಂತಹ ಶಾಲೆಗಳಿಗೆ ರಜೆ ಘೋಷಿಸಲಾಗುತ್ತದೆ.’
♦ ‘ಯಾವೆಲ್ಲ ಶಾಲೆಗಳಿಗೆ ರಜೆ ಅಗತ್ಯವಿದೆ ಅನ್ನುವ ಕುರಿತು ಸಂಜೆ ವೇಳೆಗೆ ನಿರ್ಧಾರವಾಗಲಿದೆ. ಸಂಜೆ ಅಧಿಕೃತವಾಗಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಆ ಶಾಲೆಗಳು ಮೂರು ದಿನ ಮಾತ್ರ ರಜೆ ಮಾಡಬೇಕು.’
♦ ‘ಕೆಲವು ಶಾಲೆಗಳ ಆಡಳಿತ ಮಂಡಳಿಯವರು ಸ್ವಯಂ ಪ್ರೇರಿತವಾಗಿ ರಜೆ ಘೋಷಣೆ ಮಾಡುತ್ತಿದ್ದಾರೆ. ಅದು ಕಾನೂನು ಬಾಹಿರ. ರಜೆ ಅಗತ್ಯವಿರುವ ಶಾಲೆಗಳು ಜಿಲ್ಲಾಧಿಕಾರಿ ಅವರ ಅನುಮತಿ ಪಡೆಯುವುದು ಕಡ್ಡಾಯ.’
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಆರೋಗ್ಯ, ಶಿಕ್ಷಣ ಇಲಾಖೆ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.