ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ, ಯಾರೆಲ್ಲ ಲಸಿಕೆ ಪಡೆಯಬಹುದು? ಸ್ಥಳ ಎಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದ ನಂಜಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗುತ್ತಿದೆ. ಜುಲೈ 23ರಿಂದ ಕೋವಿಶೀಲ್ಡ್‍ ಲಸಿಕೆ ನೀಡಲಾಗುತ್ತದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

18 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತದೆ. ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಮಧ್ಯಾಹ್ನ 3 ಗಂಟೆವರೆಗೆ ಲಸಿಕೆ ನೀಡಲಾಗುತ್ತದೆ.

ಪ್ರತಿ ಲಸಿಕೆಗೆ 780 ರೂ. ಇರಲಿದೆ. ಆನ್‍ಲೈನ್ ಬುಕಿಂಗ್ ಅಥವಾ ನೇರವಾಗಿ ಆಸ್ಪತ್ರೆಗೆ ಬಂದು ಲಸಿಕೆ ಪಡೆಯಬಹುದಾಗಿದೆ. ಆಧಾರ್ ಕಾರ್ಡ್ ಕಡ್ಡಯವಾಗಿ ತರಬೇಕು ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

Leave a Comment