ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 APRIL 2023
SHIMOGA : ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ. ವಿವಿಧೆಡೆ ನಗದು, ದಾಖಲೆ ರಹಿತವಾಗಿ ಸಾಗಿಸುತ್ತಿದ್ದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ (Seized). ಎಲ್ಲೆಲ್ಲಿ ಏನೇನು ವಶಕ್ಕೆ ಪಡೆಯಲಾಗಿದೆ? ಇಲ್ಲಿದೆ ಡಿಟೇಲ್ಸ್
ಸೀರೆ ಸೀಜ್ : ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ (Seized). ದಾಖಲೆ ಇಲ್ಲದೆ ಸಂಗ್ರಹಿಸಿಟ್ಟಿದ್ದ 4.50 ಕೋಟಿ ಮೌಲ್ಯದ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಚೆಕ್ ಪೋಸ್ಟ್ ನಲ್ಲಿ 1.40 ಕೋಟಿ ರೂ. ನಗದು ವಶಕ್ಕೆ
ಹಣ ವಶಕ್ಕೆ : ದಾಖಲೆಗಳಿಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಗದು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – ಕಾರಿನಲ್ಲಿ ರಾಶಿ ರಾಶಿ ಬಿಯರ್ ಬಾಟಲ್, ಟಿನ್, ಕೇಸ್ ದಾಖಲು, ಈತನಕ ಎಲ್ಲೆಲ್ಲಿ ಎಷ್ಟು ಮದ್ಯ ಸೀಜ್ ಆಗಿದೆ?
ಅಕ್ಕಿ ಸೀಜ್ : ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 100 ಚೀಲ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. 1.56 ಲಕ್ಷ ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ಲಾರಿಯಲ್ಲಿ ಸಾಗಿಸುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ.
ಚೆಕ್ ಪೊಸ್ಟ್ ಗಳಲ್ಲಿ ಹೈ ಅಲರ್ಟ್
ಜಿಲ್ಲೆಯಾದ್ಯಂತ ಎಲ್ಲಾ ಚೆಕ್ ಪೊಸ್ಟ್ ಗಳಲ್ಲಿಯು ಪೊಲೀಸ್ ಇಲಾಖೆ ಮತ್ತು ಚುನಾವಣಾಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಚೆಕ್ ಪೋಸ್ಟ್ ಹಾದು ಹೋಗುವ ಪ್ರತಿ ವಾಹನದ ತಪಾಸಣೆ ಮಾಡಲಾಗುತ್ತಿದೆ.ಹಗಲು ಮತ್ತು ರಾತ್ರಿ ವೇಳೆ ಪ್ರತ್ಯೇಕವಾಗಿ ಚೆಕ್ಕಿಂಗ್ ನಡೆಸಲಾಗುತ್ತಿದೆ. ಈ ಬಾರಿ ಶಿವಮೊಗ್ಗ ನಗರದಲ್ಲಿಯು ವಿವಿಧೆಡೆ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422