ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022
ಶಿವಮೊಗ್ಗ ನಗರ ಇವತ್ತು ಕೂಡ ಸ್ಥಬ್ಧವಾಗಿದೆ. ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಇದೆ. ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ.
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆ ಬಳಿಕ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ, ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಧಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
ಬುಧವಾರ ಬೆಳಗ್ಗೆ ಕರ್ಫ್ಯೂ ಸಡಿಲಗೊಳಿಸಲಾಗಿತ್ತು. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗ್ಗೆ 6 ಗಂಟೆಯಿಂದ 9ರವರೆಗೆ ಜನರು ತಮ್ಮ ಬಡಾವಣೆಗಳಲ್ಲಿ ಅಗತ್ಯ ವಸ್ತುಗಳ ಖರೀದಿ ಮಾಡಿದರು.
ಬಂದೋಬಸ್ತ್, ಬ್ಯಾರಿಕೇಡ್ ಅಳವಡಿಕೆ
ಬೆಳಗ್ಗೆ 9 ಗಂಟೆ ಬಳಿಕ ಶಿವಮೊಗ್ಗ ನಗರದಲ್ಲಿ ಜನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಯಿತು. ಅಂಗಡಿಗಳನ್ನು ಬಂದ್ ಮಾಡಿಸಲಾಯಿತು. ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ನಿರ್ಬಂಧಿಸಲಾಯಿತು. ಬಿ.ಹೆಚ್.ರಸ್ತೆಯಲ್ಲಿ ವಾಹನ ಸಂಚಾರವಿಲ್ಲ. ನೆಹರೂ ರಸ್ತೆ ಕೂಡ ಬಿಕೋ ಅನ್ನುತ್ತಿದೆ. ಕೆಲವು ಕಡೆ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
ನಗರದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೆ.ಎಸ್.ಆರ್.ಪಿ, ಡಿಎಆರ್ ಪೊಲೀಸರನ್ನು ಬಂದೋಬಸ್ತ್’ಗೆ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಕರ್ಫ್ಯೂ ಅವಧಿ ಮತ್ತೊಂದು ದಿನಕ್ಕೆ ವಿಸ್ತರಣೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422