ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 APRIL 2023
SHIMOGA : ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (Candidate) ಕುರಿತು ಕುತೂಹಲ ಮುಂದುವರೆದಿದೆ. ಈ ನಡುವೆ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಎಸ್.ಎನ್.ಚನ್ನಬಸಪ್ಪ ಅವರ ಹೆಸರು ಮುನ್ನಲೆಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭ ಕೋರುವ ಸಂದೇಶಗಳು ಕಾಣಿಸಿಕೊಂಡಿದೆ.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗಾಗಿ ಬಿಜೆಪಿಗೆ ಹೊಸ ಅಭ್ಯರ್ಥಿಯನ್ನು (Candidate) ಹುಡುಕುವ ಅನಿವಾರ್ಯತೆ ಇದೆ. ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್, ಎಸ್.ಎಸ್.ಜ್ಯೋತಿ ಪ್ರಕಾಶ್, ಡಾ.ಧನಂಜಯ ಸರ್ಜಿ, ಆಯನೂರು ಮಂಜುನಾಥ್ ಸೇರಿದಂತೆ ಹಲವರ ಹೆಸರು ಚರ್ಚೆಯಾಗುತ್ತಿತು. ಇಂದು ಮಧ್ಯಾಹ್ನದಿಂದ ಎಸ್.ಎಸ್.ಚನ್ನಬಸಪ್ಪ ಅವರ ಹೆಸರು ಮುನ್ನಲೆಗೆ ಬಂದಿದೆ.
ಇದನ್ನೂ ಓದಿ – ಶಿವಮೊಗ್ಗ ಕಾಂಗ್ರೆಸ್ ಕಚೇರಿ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಭಾವುಕರಾದ ಜಿಲ್ಲಾಧ್ಯಕ್ಷ
ಈಶ್ವರಪ್ಪ ಅವರ ಬೆಂಬಲಿಗ ಎಸ್.ಎಸ್.ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಲಿದೆ ಎಂದು ಬಿಜೆಪಿ ಪಾಳಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿಯು ಚನ್ನಬಸಪ್ಪ ಅವರಿಗೆ ಶುಭ ಕೋರುವ ಸಂದೇಶಗಳನ್ನು ಪ್ರಕಟಿಸಲಾಗುತ್ತಿದೆ. ಈ ನಡುವೆ ಚನ್ನಬಸಪ್ಪ ಅವರ ಪೋಸ್ಟರ್‌ಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಂಗಳವಾರ ನಾಮಪತ್ರ ಸಲ್ಲಿಸುತ್ತಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಇನ್ನಷ್ಟೆ ಪ್ರಕಟವಾಗಬೇಕಿದೆ. ಆ ಬಳಿಕ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಕುರಿತ ಕುತೂಹಲಕ್ಕೆ ತೆರೆ ಬೀಳಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422