ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 APRIL 2023
SHIMOGA : ವಿಧಾನಸಭೆ ಚುನಾವಣೆಗೆ ಶಿವಮೊಗ್ಗದ ಅಭ್ಯರ್ಥಿಗಳ ಕುರಿತು ಕುತೂಹಲ ಮುಂದುವರೆದಿದೆ. ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಚರ್ಚೆ ಹುಟ್ಟುಹಾಕಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಹಲವರ ಹೆಸರುಗಳು ಮುನ್ನಲೆಗೆ ಬಂದಿವೆ. ಆಕಾಂಕ್ಷಿಗಳಿಗೆ ಶುಭ ಕೋರುವ ಸಂದೇಶಗಳನ್ನೂ ಪ್ರಕಟಿಸಲಾಗುತ್ತಿದೆ. ticket
ಯಡಿಯೂರಪ್ಪ, ಕಾಂತೇಶ್ ಭೇಟಿ
ಚುನಾವಣಾ ರಾಜಕೀಯಕ್ಕೆ ಕೆ.ಎಸ್.ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ. ಹಾಗಾಗಿ ಅವರ ಪುತ್ರನಿಗೆ ಟಿಕೆಟ್ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ. ಈ ನಡುವೆ ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್ ಅವರು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಚರ್ಚೆ ನಡೆಸಿದ್ದಾರೆ. ಇದು ಬಿಜೆಪಿ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.
ಇದನ್ನೂ ಓದಿ – ಮಗಳು ಬಿಜೆಪಿ ಸೇರ್ಪಡೆ ಕುರಿತು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮೊದಲ ಪ್ರತಿಕ್ರಿಯೆ, ಏನಂದ್ರು ಹಿರಿಯ ನಾಯಕ?
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಈ.ಕಾಂತೇಶ್ ಅವರು, ‘ಶಿವಮೊಗ್ಗ ನಗರ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಅವರಿಗೇ ಟಿಕೆಟ್ (ticket) ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ಮನವೊಲಿಸುವುದಾಗಿ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ಈಶ್ವರಪ್ಪ ಅಥವಾ ನನಗೆ ಟಿಕೆಟ್ ಕೊಡುವ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣ ಚರ್ಚೆ ಬಿರುಸು
ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದಂತೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ಮಾರ್ಗ ಸುಗಮವಾಗಿದೆ. ಹೈಕಮಾಂಡ್ ತನಕ ತಮ್ಮ ಹೆಸರು ತಲುಪಿಸಲು ನಾನಾ ಕಸರತ್ತು ಮಾಡುತ್ತಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಹಲವರ ಹೆಸರು ಚರ್ಚೆಗೆ ಬಂದಿವೆ.
ಇದನ್ನೂ ಓದಿ – ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ದಿಢೀರ್ ಬಿಜೆಪಿ ಸೇರ್ಪಡೆ, ಕಾರಣವೇನು? ಮುಂದೇನು?
ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್ ಸೇರಿದಂತೆ ಹಲವರ ಹೆಸರುಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ಟಿಕೆಟ್ ಫೈನಲ್ ಆಗಿದ್ದು ಘೋಷಣೆಯೊಂದೇ ಬಾಕಿ ಎಂದೂ ಆಕಾಂಕ್ಷಿಗಳಿಗೆ ಅಭಿನಂದನೆಯನ್ನೂ ಸಲ್ಲಿಸುತ್ತಿದ್ದಾರೆ.
ಮುನ್ನಲೆಗೆ ಬಂದ ಹರ್ಷ ಕುಟುಂಬದ ಹೆಸರು
ಇನ್ನೊಂದೆಡೆ, ಹಿಂದೂ ಹರ್ಷನ ಕುಟುಂಬದವರಿಗೆ ಟಿಕೆಟ್ (ticket) ನೀಡಬೇಕು ಎಂದೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಲಾಗಿದೆ. ಹರ್ಷ ಹಿಂದುತ್ವಕ್ಕಾಗಿ ಜೀವ ತೆತ್ತಿದ್ದಾನೆ. ಆದ್ದರಿಂದ ಆತನ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಪೋಸ್ಟರ್‍ಗಳನ್ನು ಪ್ರಕಟಿಸಲಾಗುತ್ತಿದೆ. ಪ್ರತಿ ಪಕ್ಷಗಳ ಸಾಮಾಜಿಕ ಹ್ಯಾಂಡಲ್‍ಗಳಲ್ಲಿಯು ಈ ವಿಚಾರ ಚರ್ಚೆ ಮಾಡಲಾಗುತ್ತಿದೆ.
ಇದನ್ನೂ ಓದಿ – ಚುನಾವಣಾ ರಾಜಕೀಯ ನಿವೃತ್ತಿ, ಈಶ್ವರಪ್ಪ ಮೊದಲ ಪ್ರತಿಕ್ರಿಯೆ, ಏನಂದ್ರು ಮಾಜಿ ಮಿನಿಸ್ಟರ್?
ಈಶ್ವರಪ್ಪ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ, ಶಿವಮೊಗ್ಗ ನಗರಕ್ಕೆ ಬಿಜೆಪಿ ಟಿಕೆಟ್ ಪ್ರಕಟಿಸದಿರುವುದು ಹಲವು ಚರ್ಚೆ, ಲೆಕ್ಕಾಚಾರ, ಊಹಾಪೋಹಕ್ಕೆ ಕಾರಣವಾಗಿದೆ. ಬಿಜೆಪಿ ಟಿಕೆಟ್ ಪ್ರಕಟವಾಗದೆ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣೆ ಕಣದಲ್ಲಿ ಸ್ಪಷ್ಟತೆ ಗೋಚರಿಸುವುದಿಲ್ಲ ಎನ್ನಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422