ಶಿವಮೊಗ್ಗ ಕಮಿಷನರ್‌ಗೆ ಸ್ಮಾರ್ಟ್‌ ಸಿಟಿ ಕಾಮಗಾರಿಯಿಂದ ಕರೆಂಟ್‌ ಶಾಕ್‌..!

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 25 JULY 2023

SHIMOGA : ಸ್ಮಾರ್ಟ್‌ ಸಿಟಿ ಯೋಜನೆಯ ವಿದ್ಯುತ್‌ ಕಾಮಗಾರಿಗಳ ಕುರಿತು ಜನರು ಆಕ್ಷೇಪ ಮತ್ತು ಆತಂಕ ವ್ಯಕ್ತಪಡಿಸುತ್ತಿರುವುದು ಹೊಸತೇನಲ್ಲ. ಈಗ ನಗರದ ಹಿರಿಯ ಅಧಿಕಾರಿಗೆ ಸ್ಮಾರ್ಟ್‌ ಸಿಟಿ ಯೋಜನೆಯ ಅವೈಜ್ಞಾನಿಕ ವಿದ್ಯುತ್‌ ಕಾಮಗಾರಿಯಿಂದ ಕರೆಂಟ್‌ ಶಾಕ್‌ (Shock) ತಗುಲಿದೆ. ಇದನ್ನು ಖುದ್ದು ಅಧಿಕಾರಿಯೆ ಬಹಿರಂಗಪಡಿಸಿದ್ದಾರೆ.

Shivamogga-Live-Number-1-Website

Mayanna-Gowda-Shimoga-Palike-Commissioner

ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್‌, ಈಚೆಗಷ್ಟೆ ಸ್ಮಾರ್ಟ್‌ ಸಿಟಿ ಎಂ.ಡಿ. ಜವಾಬ್ದಾರಿಯನ್ನು ವಹಿಸಿಕೊಂಡಿರುವ ಮಾಯಣ್ಣ ಗೌಡ ಅವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಇದನ್ನು ಸ್ವತಃ ಮಾಯಣ್ಣಗೌಡ ಅವರೆ ಬಹಿರಂಗಪಡಿಸಿದ್ದಾರೆ.

ಏನಿದು ಕರೆಂಟ್‌ ಶಾಕ್‌ ಕೇಸ್?‌

ಶಿವಮೊಗ್ಗ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯ ಭೂಗತ ವಿದ್ಯುತ್‌ ಕೇಬಲ್‌ ಅವೈಜ್ಞಾನಿಕ ಕಾಮಗಾರಿ, ಲೋಪಗಳ ಕುರಿತು ಪಕ್ಷಾತೀತವಾಗಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸಭೆಯಲ್ಲಿ ಮಾತನಾಡಿದ ಕಮಿಷನರ್‌ ಮಾಯಣ್ಣಗೌಡ, ತಮಗೆ ಕರೆಂಟ್‌ ಹೊಡೆದ ವಿಚಾರವನ್ನು ಪ್ರಸ್ತಾಪಿಸಿದರು.

Parishrama NEET Academy

ತುಂಗಾ ನದಿ ತೀರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ಮಂಟಪ ಮುಳುಗಿರುವುದನ್ನು ಜನರು ವೀಕ್ಷಿಸಲು ಮಂಟಪದ ಸಮೀಪ ತೆರಳಲು ಅವಕಾಶವಿಲ್ಲ. ಅಲ್ಲಿ ಗೇಟ್‌ಗಳನ್ನು ಬಂದ್‌ ಮಾಡಲಾಗಿದೆ. ಜನರು ಮಂಟಪ ನೋಡಲು ಅವಕಾಶ ಕೊಡಿ ಎಂದು ಜನಪ್ರತಿನಿಧಿಗಳು ಒತ್ತಾಯಿಸಿದ್ದರು. ಈ ಹಿನ್ನೆಲೆ ಪರಿಶೀಲನೆಗೆ ಸ್ಥಳಕ್ಕೆ ತೆರಳಿದ್ದಾಗ ಕರೆಂಟ್‌ ಶಾಕ್‌ (Shock) ಹೊಡೆದಿದೆ ಎಂದು ಮಾಯಣ್ಣ ಗೌಡ ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ವಿಚಾರ, ಶಿಕ್ಷಣ ಇಲಾಖೆಯಿಂದ ಪ್ರಮುಖ ಸೂಚನೆ, ಯಾವ್ಯಾವ ಶಾಲೆಗೆ ರಜೆ ಸಿಗುತ್ತೆ?

‘ಸ್ಥಳಕ್ಕೆ ಭೇಟಿ ನೀಡಿದಾಗ ವಿದ್ಯುತ್‌ ವಯರ್‌ ಒಂದನ್ನು ನೆಲಕ್ಕೆ ಹಾಗೆ ಬಿಡಲಾಗಿತ್ತು. ಅದರ ಮೇಲೆ ಕಲಿಟ್ಟಾಗ ನನಗೆ ಕರೆಂಟ್‌ ಶಾಕ್‌ ಹೊಡೆಯಿತು. ಕೂಡಲೆ ಫೋಟೊಗಳನ್ನು ತೆಗೆದು ಸ್ಮಾರ್ಟ್‌ ಸಿಟಿಯ ವಾಟ್ಸಪ್‌ ಗ್ರೂಪ್‌ನಲ್ಲಿ ಕಳುಹಿಸಿದೆ. ಇದನ್ನು ತಕ್ಷಣ ಸರಿಪಡಿಸುವಂತೆ ಸೂಚಿಸಿದೆʼ ಎಂದು ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment