Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ದುಡ್ಡು, ಪರ್ಸ್ ಕಳೆದುಕೊಂಡಿದ್ದ ಮಹಿಳೆಯ ಮನೆ ಹುಡುಕಿ ತಲುಪಿಸಿದ ಪಂಕ್ಚರ್ ಶಾಪ್ ರಫೀಕ್

ದುಡ್ಡು, ಪರ್ಸ್ ಕಳೆದುಕೊಂಡಿದ್ದ ಮಹಿಳೆಯ ಮನೆ ಹುಡುಕಿ ತಲುಪಿಸಿದ ಪಂಕ್ಚರ್ ಶಾಪ್ ರಫೀಕ್

18/02/2022 10:29 AM
ನಿತಿನ್‌ ಕೈದೊಟ್ಲು

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಪಡೆಯಲು ಬ್ಯಾಂಕಿನಿಂದ 10 ಸಾವಿರ ರೂ. ಹಣ ಬಿಡಿಸಿಕೊಂಡು ಮನೆಗೆ ಮರಳುವ ವೇಳೆ ಪರ್ಸ್ ಕಳೆದುಕೊಂಡು ಚಿಂತೆಗೀಡಾಗದ್ದರು. ಆದರೆ ಆ ಚಿಂತೆ ಒಂದೇ ದಿನದಲ್ಲಿ ಮಾಯವಾಗಿ ಕಳೆದು ಹೋಗಿದ್ದ ಹಣದ ಪರ್ಸ್ ಕೈ ಸೇರಿತ್ತು.

Shimoga Nanjappa Hospital Cancer Care Center

ನಡೆದ ಘಟನೆ ಏನು?

ದುರ್ಗಿಗುಡಿ ಶ್ರೀ ಶನೇಶ್ವರ ದೇವಸ್ಥಾನ ಬಳಿ ಚಿಕ್ಕ ಸೈಕಲ್ ಪಂಕ್ಚರ್ ಅಂಗಡಿ ನಡೆಸುತ್ತಿರುವ ರಫೀಕ್ ಖಾನ್ ಎಂಬುವರಿಗೆ ನಗರದ ಸವಳಂಗ ರಸ್ತೆಯಲ್ಲಿ ಪರ್ಸ್ ಸಿಕ್ಕಿತ್ತು. ಅದನ್ನು ತೆಗೆದು ನೋಡಿದಾಗ 10,202 ರೂ. ನಗದು ಮತ್ತು ಎಟಿಎಂ ಕಾರ್ಡ್ ಗಳಿದ್ದವು. ಆದರೆ ಅದರಲ್ಲಿ ಯಾರದ್ದೇ ಹೆಸರು ಇರಲಿಲ್ಲ.

ಎಟಿಎಂ ಕಾರ್ಡ್ ಆಧಾರದಲ್ಲಿ ಪತ್ತೆ

ಬ್ಯಾಂಕ್ ಎಟಿಎಂ ಕಾರ್ಡ್ ಆಧಾರದ ಮೇಲೆ ಪರ್ಸ್ ವಾರಸುದಾರರನ್ನು ಪತ್ತೆ ಮಾಡಿ ಅವರಿಗೆ ಮರಳಿ ಮಾನವೀಯತೆ ಮೆರೆದಿದ್ದಾರೆ. ಎಟಿಎಂ ಕಾರ್ಡ್ ಯಾವ ಬ್ಯಾಂಕಿನದು ಎಂದು ನೋಡಿಕೊಂಡ ಅವರು ನೇರವಾಗಿ ಬ್ಯಾಂಕಿಗೆ ತೆರಳಿ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಮೊಬೈಲ್ ನಂಬರ್ ತೆಗೆದುಕೊಂಡು ಪೋನ್ ಮಾಡಿದ್ದಾರೆ.

ಮನೆಗೆ ಹೋಗಿ ಪರ್ಸ್ ಕೊಟ್ಟರು

ಕರೆ ಸ್ವೀಕರಿಸಿದ ಮಹಿಳೆ ಜಯನಗರದ ಧನಲಕ್ಷ್ಮೀ ಎಂದು ಪರಿಚಯ ಮಾಡಿಕೊಂಡಿದ್ದಾರೆ. ನಿಮ್ಮ ಪರ್ಸ್ ಸಿಕ್ಕಿದೆ, ಅದನ್ನು ತಲುಪಿಸುವ ಉದ್ದೇಶದಿಂದ ಬ್ಯಾಂಕ್ ಅಧಿಕಾರಿಗಳ ಮೂಲಕ ನಿಮ್ಮ ಮೊಬೈಲ್ ನಂಬರ್ ಪಡೆದು ಕರೆ ಮಾಡಿದ್ದೇನೆ ಎಂದು ಹೇಳಿದಾಗ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಎಲ್ಲಿಲ್ಲದ ಸಂತಸ. ಆಸ್ಪತ್ರೆ ಖರ್ಚಿಗಾಗಿ ಬ್ಯಾಂಕಿನಿಂದ ಡ್ರಾ ಮಾಡಿಕೊಂಡು ಸೈಕಲ್‌ನಲ್ಲಿ ಮನೆಗೆ ಬರುವಾಗ ಪರ್ಸ್ ಕಳೆದುಕೊಂಡಿದ್ದೆ ಎಂದು ಮಹಿಳೆ ಹೇಳಿದ್ದಾರೆ.

ಗುರುವಾರ ಬೆಳಗ್ಗೆ ರಫೀಕ್ ಖಾನ್ ಅವರು ಸ್ನೇಹಿತ ಟಿ.ನಾಗರಾಜ್ ಅವರು ಸಂಪೂರ್ಣ ಹಣ ಇದ್ದ ಪರ್ಸ್‌ನ್ನು ಜಯನಗರದ ಧನಲಕ್ಷ್ಮಿ ಅವರ ಮನೆಗೆ ತೆರಳಿ ಅವರ ಕೈಗೆ ಇಟ್ಟಿದ್ದಾರೆ.

ಇದನ್ನೂ ಓದಿ | ಸಿಟಿ ಬಸ್ಸಲ್ಲಿ ಪರ್ಸ್ ಕಳೆದುಕೊಂಡ ಮಹಿಳೆಗೆ ಕೆಲವೆ ಹೊತ್ತಲ್ಲಿ ಮತ್ತೊಂದು ಶಾಕ್

Shimoga Live News Reach Country Wise Reach

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article jayanagara police station in shimoga ತಿಥಿ ಕಾರ್ಯಕ್ಕೆ ಹೋಗಿದ್ದ ಗುತ್ತಿಗೆದಾರರ ಮನೆಯಲ್ಲಿ ಲಕ್ಷ ಲಕ್ಷ ಮೌಲ್ಯದ ಆಭರಣ, ನಗದು ಕಳವು
Next Article Tunga Bridge Pot holes cleared IMPACT | ತುಂಗಾ ನದಿ ಹೊಸ ಸೇತುವೆ ಮೇಲೆ ಡಾಂಬರೀಕರಣ ದಿನಾಂಕ ನಿಗದಿ, ವಾಹನಗಳಿಗೆ ಪರ್ಯಾಯ ಮಾರ್ಗ

ಇದನ್ನೂ ಓದಿ

130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Savirada-Vachana-in-Shimoga-city.
SHIVAMOGGA CITY

ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
Shimoga-Freedom-Park
SHIVAMOGGA CITY

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?