SHIVAMOGGA LIVE NEWS | 18 MARCH 2023
SHIMOGA : ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ (Cylinder) ಲಾರಿಯೊಂದು ಪಲ್ಟಿಯಾಗಿದೆ. ಇದರಿಂದ ಸುತ್ತಮುತ್ತಲ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.
ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಮಾಚೇನಹಳ್ಳಿಯಿಂದ ಎನ್.ಆರ್.ಪುರ ರಸ್ತೆಯ ಮೂಲಕ ಮಂಗಳೂರು ಕಡೆಗೆ ಸಿಲಿಂಡರ್ (Cylinder) ಲಾರಿ ಚಲಿಸುತ್ತಿತ್ತು ಎಂದು ತಿಳಿದು ಬಂದಿದೆ.
ಒಡ್ಡಿನಕೊಪ್ಪ ಬಳಿ ರಸ್ತೆಯಲ್ಲಿ ತಿರುವು ಇದೆ. ಇಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ ಇದ್ದ ಸಿಲಿಂಡರ್‌ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಪೆಟ್ರೋಲ್ ಬಂಕ್ ಪಕ್ಕದಲ್ಲಿಯೆ ಘಟನೆ ಸಂಭವಿಸಿದ್ದರಿಂದ ಆತಂಕ ಇಮ್ಮಡಿಯಾಗಿದೆ.
ಇನ್ನು, ಸಿಲಿಂಡರ್ ಲಾರಿ ಪಲ್ಟಿ ಆಗಿರುವುದರಿಂದ ರಸ್ತೆಯ ಎರಡು ಬದಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಇದನ್ನೂ ಓದಿ – ಮುಂಬೈನಿಂದ ಶಿವಮೊಗ್ಗಕ್ಕೆ ಬಂದ ಖಾಸಗಿ ಬಸ್ಸಿನಲ್ಲಿದ್ದ ಲಗೇಜ್ ದಿಢೀರ್ ತಪಾಸಣೆ ಮಾಡಿದ ಪೊಲೀಸ್
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು