ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಡಿ.ಮಂಜುನಾಥ್ ಅವರು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಡಿ.ಮಂಜುನಾಥ್ ಅವರು ಅತ್ಯಧಿಕ ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿಗಳಾಗಿದ್ದ ಶಂಕರಪ್ಪ ಅವರು ಎರಡನೇ ಸ್ಥಾನ, ಶಿ.ಜು.ಪಾಶ ಮತ್ತು ಗಾ.ರಾ.ಶ್ರೀನಿವಾಸ್ ಅವರು ನಂತರದ ಸ್ಥಾನ ಪಡೆದಿದ್ದಾರೆ. ಮತಗಳ ವಿವರ ಇನ್ನಷ್ಟೆ ಲಭ್ಯವಾಗಬೇಕಿದೆ.
ಪಟಾಕಿ, ಹಾರ, ಸಿಹಿ
ಡಿ.ಮಂಜುನಾಥ್ ಅವರಿಗೆ ಅಧಿಕ ಮತಗಳು ಲಭಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಅವರ ಅಭಿಮಾನಗಳು ಸಂಭ್ರಮಾಚರಣೆ ಮಾಡಿದರು. ಮತ ಎಣಿಕೆ ಕೇಂದ್ರದ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಡಿ.ಮಂಜುನಾಥ್ ಅವರಿಗೆ ಹಾರ ಹಾಕಿ, ಘೋಷಣೆಗಳನ್ನು ಕೂಗಿದರು.
ನಾಲ್ಕನೆ ಭಾರಿಗೆ ಅಧ್ಯಕ್ಷಗಿರಿ
ಡಿ.ಮಂಜುನಾಥ್ ಅವರು ಈ ಹಿಂದೆಯು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾಗಿದ್ದರು. ಅವರು ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿ 73ನೇ ಕನ್ನಡ ಸಾಹಿತ್ಯ ಸಮ್ಮೇಳನ ಶಿವಮೊಗ್ಗದಲ್ಲಿ ನಡೆದಿತ್ತು. ನಾಲ್ಕನೆ ಭಾರಿಗೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















