ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮಲೆನಾಡು ಮಳೆಕಾಡು ವನ್ಯಜೀವಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಿಂದ ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದಲ್ಲಿರುವ (Elephant Camp) ಮಾವುತ ಹಾಗೂ ಕಾವಾಡಿಗಳಿಗೆ ದಸರಾ ಹಬ್ಬದ ಪ್ರಯುಕ್ತ ಬಟ್ಟೆ ವಿತರಿಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆನೆಗಳ ತರಬೇತಿ ಕ್ಯಾಂಪ್‌ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎಂಆರ್‌ಆರ್‌ಎಸ್ ಸಂಸ್ಥೆಯ ಅಂಗಸಂಸ್ಥೆ ಸಕ್ರೆಬೈಲು ವೈಲ್ಡ್ ಟಸ್ಕರ್ ಗೌರವಾಧ್ಯಕ್ಷ ಎಂ .ಶ್ರೀಕಾಂತ್, ಆನೆ ಬಿಡಾರದ 80 ಮಾವುತರು, ಕಾವಾಡಿಗಳು ಮತ್ತು ಗಾಜನೂರು ವನ್ಯಜೀವಿ ವಿಭಾಗದ ಡಿಸಿಪಿ ವಾಚರ್ಸ್ ಮತ್ತು ನಿವೃತ್ತ ಜಮೇದಾರ್ ಗಳಿಗೆ ಬಟ್ಟೆ ವಿತರಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಜೇಸುದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಉಪಸ್ಥಿತರಿದ್ದರು. ಪತ್ರಕರ್ತ ನಾಗರಾಜ್ ನೇರಿಗೆ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವನ್ಯಜೀವಿ ವಿಭಾಗದ ವೈದ್ಯ ಡಾ.ವಿನಯ್, ಡಿಆರ್‌ಎಫ್‌ಒ ಮಲ್ಲಿಕಾರ್ಜುನ್ ಸೇರಿದಂತೆ ಬಿಡಾರದ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ- ದಸರಾ ರಜೆ, ಪ್ರಯಾಣಿಕರ ಅನುಕೂಲಕ್ಕಾಗಿ KSRTCಯಿಂದ ವಿಶೇಷ ವ್ಯವಸ್ಥೆ