ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠದ ಕಾಲಭೈರವೇಶ್ವರ ದೇವಾಲಯ ಆವರಣದಲ್ಲಿ ಅ.22 ರಂದು ನಡೆಯುವ ದಸರಾ ಕಾರ್ಯಕ್ರಮದಲ್ಲಿ ಜನಪದ ಗೀತೆಗಳ ವೃಂದಗಾಯನ ಸ್ಪರ್ಧೆ ಅಯೋಜಿಸಲಾಗಿದೆ. ಒಂದು ತಂಡದಲ್ಲಿ ಕನಿಷ್ಠ ಐದು ಮಂದಿ, ಗರಿಷ್ಠ ಎಂಟು ಮಂದಿ ಇರಬಹುದು. ಆಸಕ್ತ ತಂಡಗಳು ಅ.15ರ ಒಳಗೆ ಹೆಸರು ನೋಂದಣಿ ಮಾಡಿಕೊಳ್ಳಲು ಜಾನಪದ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9449552795 ಸಂಪರ್ಕಿಸಬಹುದು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ- ಗುಡ್ ನ್ಯೂಸ್, ವಂದೇ ಭಾರತ್ ರೀತಿಯ ಮತ್ತೊಂದು ರೈಲು ರೆಡಿ, ಟಿಕೆಟ್ ದರ ಕಡಿಮೆ, ಹೇಗಿದೆ ಹೊಸ ರೈಲು?
ದಸರಾದಲ್ಲಿ ಕವಿಗೋಷ್ಟಿ
ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖಾ ಮಠದ ಸಹಯೋಗದಲ್ಲಿ ಪ್ರತಿ ವರ್ಷದಂತೆ ದಸರಾ ಕವಿಗೋಷ್ಠಿ ಏರ್ಪಡಿಸಲಾಗುವುದು ಎಂದು ಅಧ್ಯಕ್ಷರಾದ ಡಿ.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಸರಾ ಕಾವ್ಯ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತಿಯಿರುವವರು ತಮ್ಮ ಕವನದ ಜೊತೆ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ. ಆಯ್ದ ಕವನಗಳಿಗೆ ದಸರಾ ಕಾವ್ಯ ಸಂಭ್ರಮದಲ್ಲಿ ಭಾಗವಹಿಸಲು ಅವಕಾಶವಿರಲಿದೆ. ಹೆಚ್ಚಿನ ಮಾಹಿತಿಗಾಗಿ ಡಿ. ಮಂಜುನಾಥ, ದೂರವಾಣಿ ಸಂಖ್ಯೆ : 9449552795 ಸಂಪರ್ಕ ಮಾಡಲು ತಿಳಿಸಲಾಗಿದೆ.