ಶಿವಮೊಗ್ಗಕ್ಕೆ ಮೂರು ಆನೆಗಳು ಆಗಮನ, ಪೂಜೆ, ಸ್ವಾಗತ, ಯಾವೆಲ್ಲ ಆನೆಗಳು ಬಂದಿವೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ದಸರಾ ಸುದ್ದಿ: ಶಿವಮೊಗ್ಗ ದಸರಾ ಜಂಬೂ ಸವಾರಿಗೆ ಸಕ್ರೆಬೈಲು ಬಿಡಾರದ ಮೂರು ಆನೆಗಳು ಇವತ್ತು ನಗರಕ್ಕೆ ಆಗಮಿಸಿವೆ. ಕೋಟೆ ರಸ್ತೆಯ ವಾಸವಿ ಶಾಲೆ ಆವರಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಮೂರು ಆನೆಗಳನ್ನು (Elephants) ಸ್ವಾಗತಿಸಿ, ಪೂಜೆ ಸಲ್ಲಿಸಲಾಯಿತು.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಸಕ್ರೆಬೈಲು ಬಿಡಾರದ ಸಾಗರ್‌, ಬಹದ್ದೂರ್‌ ಮತ್ತು ಬಾಲಣ್ಣ ಆನೆಗಳು ಶಿವಮೊಗ್ಗಕ್ಕೆ ಆಗಮಿಸಿವೆ. ವಾಸವಿ ಶಾಲೆ ಆವರಣದಲ್ಲಿ ಆನೆಗಳು ತಂಗಲು ವ್ಯವಸ್ಥೆ ಮಾಡಲಾಗಿದೆ. ಆನೆಗಳ ಜೊತೆ ಮಾವುತರು, ಕಾವಾಡಿಗಳು ಮತ್ತು ಬಿಡಾರದ ಸಿಬ್ಬಂದಿ ಆಗಮಿಸಿದ್ದಾರೆ.

ಆನೆಗಳು ಬರುತ್ತಿದ್ದಂತೆ ಶಾಸಕ ಎಸ್‌.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳು ಕೋಟೆ ‍‍ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಮೂರು ಆನೆಗಳಿಗೆ ಪೂಜೆ ಸಲ್ಲಿಸಿ ಸ್ವಾಗತಿಸಲಾಯಿತು.

Sakrebyle-Elephants-welcomed-in-Shimoga-city-for-dasara.
ಸಕ್ರೆಬೈಲು ಬಿಡಾರದಿಂದ ಶಿವಮೊಗ್ಗಕ್ಕೆ ಆಗಮಿಸಿದ ಮೂರು ಆನೆಗಳು.
Sakrebyle-Elephants-welcomed-in-Shimoga-city-for-dasara.
ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಪೂಜೆ.
Sakrebyle-Elephants-welcomed-in-Shimoga-city-for-dasara.
ವಾಸವಿ ಶಾಲೆ ಆವರಣದಲ್ಲಿ ಮೂರು ಆನೆಗಳಿಗೆ ಪೂಜೆ ಸಲ್ಲಿಸಲಾಯಿತು.

ಇದನ್ನೂ ಓದಿ » ಶಿವಮೊಗ್ಗದ ಚೇತನ್‌ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್‌ ಶಿಫಾರಸು

JNNCE-Admission-Advt-scaled

Leave a Comment