ಶಿವಮೊಗ್ಗ ದಸರಾ ಮೆರವಣಿಗೆ, ಮೆರಗು ಹೆಚ್ಚಿಸಿದ ಕಲಾ ತಂಡಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DASARA NEWS, 12 OCTOBER 2024 : ಶಿವಮೊಗ್ಗ ದಸರಾ ಮೆರವಣಿಗೆ (Dasara) ಆರಂಭವಾಗಿದೆ. ನಾಡ ದೇವಿ ಚಾಮುಂಡೇಶ್ವರಿ ಮೂರ್ತಿ ಇರುವ ಅಂಬಾರಿ ಹೊತ್ತು ಸಾಗರ ಆನೆ ಗಂಭೀರವಾಗಿ ಹೆಜ್ಜೆ ಹಾಕುತ್ತಿದ್ದಾನೆ. ಇದರ ಹಿಂದಯೇ ಬಾಲಣ್ಣ ಮತ್ತು ಬಹದ್ದೂರ್‌ ಆನೆಗಳು ಭಾಗವಹಿಸಿವೆ. ಇದರ ಜೊತೆಗೆ ವಿವಿಧ ಕಲಾ ತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸಿವೆ.

ಶಿವಪ್ಪನಾಯಕ ಅರಮನೆ ಮುಂಭಾಗ ಮೆರವಣಿಗೆಗೆ ಚಾಲನೆ ನೀಡಲಾಯಿತು. ಇಲ್ಲಿಂದಲೇ ವಿವಿಧ ಕಲಾ ತಂಡಗಳು ನೃತ್ಯ ಮತ್ತು ಕಸರತ್ತು ಪ್ರದರ್ಶಿಸುತ್ತ ಮೆರವಣಿಗೆಯಲ್ಲಿ ಭಾಗವಹಿಸಿವೆ.

ಯಾವೆಲ್ಲ ಕಲಾ ತಂಡಗಳಿವೆ?

ಮೆರವಣಿಗೆಯಲ್ಲಿ ಮಂಗಳ ವಾದ್ಯ, ಸಮಾಳ ವಾದ್ಯ, ನಂದಿ ಧ್ವಜ ಕುಣಿತ, ವೀರಗಾಸೆ, ಚಂಡೆ ಮದ್ದಳೆ, ಗೊಂಬೆಗಳ ಕುಣಿತ, ರಾಜ್ಯ ಪ್ರಶಸ್ತಿ ವಿಜೇತ ಶೆಟ್ಟಿ ಗೊಂಬೆ ಬಳಗದಿಂದ ಕೀಲು ಕುದುರೆ, ದೊಡ್ಡ ಗೊಂಬೆಗಳ ಕುಣಿತ, ಹುಲಿ ವೇಷ ಕುಣಿತ, ರೋಡ್‌ ಆರ್ಕೇಸ್ಟ್ರಾ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿವೆ.

Shimoga Dasara

ದೇವಾನುದೇವತೆಗಳ ಮೆರವಣಿಗೆ

ಅಂಬಾರಿ ಹೊತ್ತ ಆನೆಗಳ ಜೊತೆಗೆ ನಗರದ ವಿವಿಧೆಡೆ ದೇವಾನುದೇವತೆಗಳು ಮೆರವಣಿಗೆಯಲ್ಲಿ ಭಾಗವಹಿಸಿವೆ. ವಿವಿದ ದೇಗುಲಗಳಿಂದ ಅಗಮಿಸಿರುವ ಉತ್ಸವ ಮೂರ್ತಿಗಳು ಮೆರವಣಿಗೆಯಲ್ಲಿವೆ. ನೂರಕ್ಕೂ ಹೆಚ್ಚು ದೇವರುಗಳು ಮೆರವಣಿಗೆಯಲ್ಲಿವೆ.

Shimoga Dasara

ಮೆರವಣಿಗೆಯಲ್ಲಿ ತಹಶೀಲ್ದಾರ್‌ ನಡಿಗೆ

ಫ್ರೀಡಂ ಪಾರ್ಕ್‌ನಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ. ತಹಶೀಲ್ದಾರ್‌ ಗಿರೀಶ್‌ ಅವರು ಅಂಬು ಕಡಿದು, ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಕೋಟೆ ದೇವಸ್ಥಾನದಲ್ಲಿ ತಹಶೀಲ್ದಾರ್‌ ಗಿರೀಶ್‌ ಅವರು ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು ಪೇಟ, ಕೋಟು ತೊಟ್ಟು ಮೆರವಣಿಗೆಯಲ್ಲಿ ನಡೆದು ಸಾಗಿದರು.

Shimoga Dasara

ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಅಂಬಾರಿ ಮೆರವಣಿಗೆಯನ್ನು ಕಣ್ತುಂಬಿಕೊಂಡರು. ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

Shimoga Dasara

Shimoga Dasara

ಇದನ್ನೂ ಓದಿ » ಶಿವಮೊಗ್ಗ ದಸರಾ ಮೆರವಣಿಗೆಗೆ ಅದ್ಧೂರಿ ಚಾಲನೆ, ಅಂಬಾರಿ ಹೊತ್ತು ಸಾಗರನ ರಾಜಗಾಂಭೀರ್ಯ ನಡೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 12, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment