ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆ ಕಾರಣ ಹೇಳಿ ಮುಂದೂಡಿದ್ದ ಶಿಮುಲ್ (ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ) ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಹೊಸ ವರ್ಷದಿಂದ ನೂತನ ಅಧ್ಯಕ್ಷರ ಸಾರಥ್ಯದಲ್ಲಿ ಶಿಮುಲ್ ಮುನ್ನಡೆಯಲಿದೆ.
ಜನವರಿ 1ಕ್ಕೆ ನೂತನ ಅಧ್ಯಕ್ಷರ ಚುನಾವಣೆ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ಡಿ.23ರಂದು ಅಧಿಸೂಚನೆ ಹೊರಡಿಸಲಾಗಿದೆ. ಜ.1ರಂದು ಶನಿವಾರ ಬೆಳಗ್ಗೆ 10ರಿಂದ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.
ಇದನ್ನೂ ಓದಿ | ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರ ಪದಚ್ಯುತಿ
ಮಧ್ಯಾಹ್ನ 1 ಗಂಟೆಗೆ ಒಕ್ಕೂಟದ ಆಡಳಿತ ಮಂಡಳಿ ಸಭಾಂಗಣದಲ್ಲಿ ಮತದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422