ಶಿವಮೊಗ್ಗ : ರಾಜ್ಯದಲ್ಲಿ ಹಕ್ಕಿ ಜ್ವರದ (Bird Flu) ಭೀತಿ ಎದುರಾಗಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಕೋಳಿ ಮಾಂಸ ಸೇವಿಸಿದರೆ ಹಕ್ಕಿ ಜ್ವರಕ್ಕೆ ಬರಲಿದೆಯೇ ಎಂಬ ಗೊಂದಲಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಹೇಳಿದ್ದೇನು?
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಮನುಷ್ಯರಿಗೆ ಹಕ್ಕಿ ಜ್ವರ ಬರುವುದಿಲ್ಲ. ಆದರೆ ಸೋಂಕು ತಗುಲಿದ ಕೋಳಿಯ ಮಾಂಸ ಚೆನ್ನಾಗಿ ಬೇಯಿಸದೆ ಹಾಗೂ ಅವುಗಳ ಹಸಿ ಮೊಟ್ಟೆ ಸೇವನೆಯಿಂದ ರೋಗ ತಗಲುವ ಸಾಧ್ಯತೆಗಳಿರುತ್ತವೆ ಎಂದು ಎಚ್ಚರಿಸಿದರು.
![]() |
ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70 ಡಿಗ್ರಿ ಸೆಂಟಿಗ್ರೇಡ್‌ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರ ಸೇವಿಸಬೇಕು. ಅಡುಗೆಗಾಗಿ ಕೋಳಿ ಮಾಂಸ ಸಿದ್ದಪಡಿಸಿದ ನಂತರ ಕೈಗಳನ್ನು ನಂಜುನಾಶಕದಿಂದ ಸ್ವಚ್ಚವಾಗಿ ತೊಳೆದುಕೊಳ್ಳಬೇಕು. ಸೋಂಕಿತ ಹಸಿ ಮೊಟ್ಟೆಯನ್ನು ಸೇವಿಸಬಾರದು.
ಗುರುದತ್ತ ಹೆಗಡೆ, ಶಿವಮೊಗ್ಗ ಜಿಲ್ಲಾಧಿಕಾರಿ
ಡಿಹೆಚ್ಓ ಡಾ.ನಾಗರಾಜ ನಾಯ್ಕ ಮಾತನಾಡಿ, ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಯನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ, ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಖಾಯಿಲೆ ಹರಡುತ್ತದೆ. ಕೆಲವು ಸಂದರ್ಭ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ ಎಂದರು.

ಹಕ್ಕಿಜ್ವರ ಮುನ್ನೆಚ್ಚರಿಕೆಯಿಂದ ತಡೆಯಬಲ್ಲ ಖಾಯಿಲೆ. ಆದ್ದರಿಂದ ಖಾಯಿಲೆ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೆ ಹತ್ತಿರದ ಮಾಹಿತಿ ಕೇಂದ್ರ ಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ 332 ಪೌಲ್ಟ್ರಿ ಮತ್ತು 2 ಪಕ್ಷಿಧಾಮಗಳಿವೆ. ಅಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಹಾಗೂ ಚಲನವಲನ ವೀಕ್ಷಿಸಲು ತಿಳಿಸಲಾಗಿದೆ ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದರು.

65 ವರ್ಷ ದಾಟಿದವರು, ಗರ್ಭಿಣಿಯರು, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇತರೆ ಕೋಮಾರ್ಬಿಡಿಟಿ ಉಳ್ಳ ವ್ಯಕ್ತಿಗಳು ಎಚ್ಚರಿಕೆಯಿಂದ ಇರಬೇಕು. ಜಿಲ್ಲೆಯಲ್ಲಿ ಕೋಳಿ ಜ್ವರಕ್ಕೆ ಚಿಕಿತ್ಸೆ ನೀಡಲು ಅಗತ್ಯ ಔಷಧಿ ಲಭ್ಯವಿದೆ ಡಿಹೆಚ್‌ಒ ತಿಳಿಸಿದರು.

ಇದನ್ನೂ ಓದಿ » ಹಕ್ಕಿ ಜ್ವರ, ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಮೀಟಿಂಗ್, ಏನೆಲ್ಲ ಚರ್ಚೆಯಾಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200