ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 AUGUST 2023
SHIMOGA : ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹ ಲಕ್ಷ್ಮಿ (Gruhalakshmi) ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಏಕಕಾಲದಲ್ಲಿ ಎಲ್ಲ ಗ್ರಾಮ ಪ್ರಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜಿಲ್ಲಾಧಿಕಾರಿ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರರರು, ಇಓಗಳು, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಸಿಡಿಪಿಓಗಳೊಂದಿಗೆ ಗೃಹಲಕ್ಷ್ಮಿ (Gruhalakshmi) ಯೋಜನೆ ಕಾರ್ಯಕ್ರಮ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಪೂರ್ವಭಾವಿ ಸಭೆ ನಡೆಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಡಿಸಿ ಸೂಚನೆಗಳೇನು?
ಆ.27ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಏಕ ಕಾಲಕ್ಕೆ ಎಲ್ಲ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನ ಹಾಗೂ ನಗರ ಸ್ಥಳೀಯ ಸಂಸ್ಥೆ ವಾರ್ಡ್‍ಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಎಲ್ಲೆಡೆ ಬೆಳಗಾವಿ ಕಾರ್ಯಕ್ರಮ ನೇರ ಪ್ರಸಾರ ಮಾಡಬೇಕು. ಅದಕ್ಕಾಗಿ ಎಲ್‍ಇಡಿ ಪರದೆ ಅಥವಾ ಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು. ಫಲಾನುಭವಿಗಳು ಮತ್ತು ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಸೇರಿಸಬೇಕು. ಸರ್ಕಾರಿ ಕಟ್ಟಡಗಳು ಅಥವಾ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಇದಕ್ಕೆ ಎಲ್ಲ ಸಿದ್ಧತೆ ಮಾಡಬೇಕು.
ಇದನ್ನೂ ಓದಿ – ‘ಶರಾವತಿ ಸಂತ್ರಸ್ತರ ಸಮಸ್ಯೆಗೆ ಶೀಘ್ರ ಶಾಶ್ವತ ಪರಿಹಾರ, ರೈತರ ಹಿತ ಕಾಯಲು ಕಾನೂನು ಸಮರಕ್ಕು ಸಿದ್ಧ’
ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾ.ಪಂ.ಗಳಲ್ಲಿ, ಮಹಾನಗರ ಪಾಲಿಕೆ ಹಾಗೂ ನಗರಸಭೆಗಳಲ್ಲಿ ಪ್ರತಿ ವಾರ್ಡುಗಳು, ಪುರಸಭೆಗಳಲ್ಲಿ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ 3 ರಿಂದ 4 ವಾರ್ಡುಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಮಳೆಗಾಲವಾದ್ದರಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು.
ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾ.ಪಂ ಗಳಲ್ಲಿ ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಈಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು. ನೋಡಲ್ ಅಧಿಕಾರಿಗಳು ಕಾರ್ಯಕ್ರಮದ ಸಿದ್ಧತೆ ಗಮನಿಸಿ ವರದಿ ಸಲ್ಲಿಸಬೇಕು.
ಇದನ್ನೂ ಓದಿ – ‘ಲೈಕ್, ಷೇರ್ ಮಾಡಿ, ಹಣ ಗಳಿಸಿʼ, ನಂಬಿದ ಶಿವಮೊಗ್ಗದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಕಾದಿತ್ತು ಆಘಾತ
ಸಭೆಯಲ್ಲಿ ತಹಶೀಲ್ದಾರ್ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಸಂತೋಷ ಕುಮಾರ್, ಸಿಡಿಪಿಓ ಚಂದ್ರಪ್ಪ, ತಾಲ್ಲೂಕುಗಳ ತಹಶೀಲ್ದಾರರು, ಇಓ, ಸಿಡಿಪಿಓ, ಸ್ಥಳೀಯ ಸಂಸ್ಥೆ ಮುಖ್ಯಸ್ಥರು ಹಾಜರಿದ್ದರು.