ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | BLAST| 3 ಜೂನ್ 2022
ರಾಗಿಗುಡ್ಡದಲ್ಲಿ ಇಎಸ್ಐ ಆಸ್ಪತ್ರೆ ಕಾಮಗಾರಿ ಸ್ಥಳದಲ್ಲಿ ಎಂಟು ಸ್ಪೋಟ ಕುರಿತು ತನಿಖೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ.ಕಾಂ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಸ್ಥಳದಲ್ಲಿ ಹೆಚ್ಚು ತೀವ್ರತೆಯ ಸ್ಪೋಟ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬರುವವರೆಗೆ ಯಾವುದೆ ಸ್ಪೋಟ ನಡೆಸದಂತೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.
ಯಾವೆಲ್ಲ ಸ್ಪೋಟಕ ಬಳಕೆ ಮಾಡಲಾಗಿದೆ, ಎಷ್ಟು ಪ್ರಮಾಣದಲ್ಲಿ ಬಳಕೆಯಾಗಿದೆ ಎಂಬುದರ ಕುರಿತು ತನಿಖೆ ನಡೆಸಲಾಗುತ್ತದೆ. ಆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ – ರಾಗಿಗುಡ್ಡದಲ್ಲಿ 8 ಭಾರಿ ಸ್ಪೋಟ ಕೇಸ್, ಡಿಸಿ ಕಚೇರಿಗೆ ಸ್ಥಳೀಯರ ದೌಡು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422