SHIVAMOGGA LIVE NEWS | VILLAGE | 16 ಮೇ 2022
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮೇ 21ರಂದು ಬೆಳ್ಳೂರು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಡಿಸಿ ವಾಸ್ತವ್ಯಕ್ಕೆ ಗ್ರಾಮ ನಿಗದಿಪಡಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೇ 21ರಂದು ಬೆಳಗ್ಗೆ 11 ಗಂಟೆಗೆ ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿಯ ಬೆಳ್ಳೂರು ಗ್ರಾಮ (VILLAGE) ಪಂಚಾಯಿತಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಭೇಟಿ ನೀಡಲಿದ್ದಾರೆ.
ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಾರ್ವಜನಿಕರನ್ನು ಭೇಟಿಯಾಗಲಿದ್ದಾರೆ. ಅಧಿಕಾರಿಗಳು ಜನರಿಂದ ಕುಂದು ಕೊರತೆ ಆಲಿಸಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಜಿಲ್ಲಾಧಿಕಾರಿ ಭೇಟಿ ಹಿನ್ನೆಲೆ ಸಾರ್ವಜನಿಕರು ತಮ್ಮ ಅಹವಾಲನ್ನು ಗ್ರಾಮದ ಕಂದಾಯ ಅಧಿಕಾರಿಗೆ ಮುಂಚಿತವಾಗಿಯೇ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.