ಶಿವಮೊಗ್ಗದ ಗಾಂಧಿ ಪಾರ್ಕ್‌ಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪರಿಶೀಲನೆ

ಶಿವಮೊಗ್ಗ: ಸಾರ್ವಜನಿಕರ ದೂರಿನ ಹಿನ್ನೆಲೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಶನಿವಾರ ಸಂಜೆ ನಗರದ ಗಾಂಧಿ ಪಾರ್ಕ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಭಿವೃದ್ಧಿ ಕಾಮಗಾರಿ ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಒದಗಿಸಲಾಗಿರುವ ಮೂಲ ಸೌಕರ್ಯಗಳ ಕುರಿತು ಮಾಹಿತಿ ಪಡೆದ ಅವರು, ಸ್ವಚ್ಛತೆ ಕಾಪಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಸಿದರು. ‘ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಪಾರ್ಕ್ ಅನ್ನು ಸುಂದರವಾಗಿ ಹಾಗೂ ಸುರಕ್ಷಿತವಾಗಿ ನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ವಾತಾವರಣ ಕಲ್ಪಿಸಬೇಕು’ ಎಂದು ನಿರ್ದೇಶನ ನೀಡಿದರು. ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಇದ್ದರು.

Shivamogga-DC-Prabhulinga-Kavalikatti-visits-Gandhi-Park