ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 6 ಜನವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಕರೆಯಲಾದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿದರು.
ಡಿಸಿ ಏನೆಲ್ಲ ಸೂಚನೆ ನೀಡಿದರು?
1) ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶನಿವಾರ ಮತ್ತು ಭಾನುವಾರ ವಾರಾಂತ್ಯ ಕರ್ಫ್ಯೂ ಘೋಷಿಸಲಾಗಿದೆ. ಇದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.
2) ಪ್ರವಾಸಿ ತಾಣಗಳಿಗೆ ಪ್ರವೇಶ ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ಈ ದಿನಗಳಲ್ಲಿ ಅವಕಾಶವಿರುವುದಿಲ್ಲ. ಆದರೆ ಅಗತ್ಯ ಸೇವೆಗಳನ್ನು ಒದಗಿಸಲು ಯಾವುದೇ ತೊಂದರೆಯಿರುವುದಿಲ್ಲ.
3) ಸರ್ಕಾರದ ನಿಗದಿತ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜು ನಡೆಸಬೇಕು.
4) ಯಾವುದೇ ನಿಗದಿತ ವ್ಯಾಪ್ತಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಅದನ್ನು ಕ್ಲಸ್ಟರ್ ಎಂದು ಗುರುತಿಸಲಾಗುವುದು. ಅಂತಹ ಕ್ಲಸ್ಟರ್ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳನ್ನು ಮುಚ್ಚಲು ಕ್ರಮ ವಹಿಸಬೇಕು.
5) ಕೋವಿಡ್ ಹರಡುವಿಕೆಯನ್ನು ತಡೆಯಲು ವಸತಿ ಶಾಲೆಗಳು, ಆಶ್ರಯ ತಾಣಗಳು ಮುಂತಾದ ಕಡೆಗಳಲ್ಲಿ ನಿರಂತರವಾಗಿ ರಾಂಡಮ್ ಸ್ಯಾಂಪಲ್ ಸಂಗ್ರಹ ಮಾಡಿ ತಪಾಸಣೆ ನಡೆಸಬೇಕು.
6) ಸಾರ್ವಜನಿಕ ಸ್ಥಳಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸುವ ಪೂರ್ವದಲ್ಲಿ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು.
7) ಮಹಾರಾಷ್ಟ್ರ, ಕೇರಳ, ಗೋವಾ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರ ರಾಂಡಮ್ ತಪಾಸಣೆ ಮಾಡಬೇಕು. ಇದಕ್ಕಾಗಿ ಶಿವಮೊಗ್ಗ, ಭದ್ರಾವತಿ ಬಸ್ ನಿಲ್ದಾಣ ಹಾಗೂ ಆಗುಂಬೆ ಚೆಕ್ ಪೋಸ್ಟ್’ನಲ್ಲಿ ವ್ಯವಸ್ಥೆ ಮಾಡಬೇಕು. ಹೊರರಾಜ್ಯ ಮತ್ತು ಹೊರದೇಶಗಳಿಂದ ಬಂದವರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ನಿಗಾ ಇರಿಸಬೇಕು.
8) ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
9) ಪ್ರತಿ ತಾಲೂಕಿನಲ್ಲಿ ಕನಿಷ್ಟ 150 ಹಾಸಿಗೆ ಸಾಮರ್ಥ್ಯದ ಹಾಸ್ಟೆಲ್ ಅಥವಾ ಸಮುದಾಯ ಭವನಗಳನ್ನು ಗುರುತಿಸಿ ಸಜ್ಜುಗೊಳಿಸಬೇಕು.
10) 15 ವರ್ಷದಿಂದ 18ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯವನ್ನು ಚುರುಕುಗೊಳಿಸಿ, ಪ್ರತಿಯೊಬ್ಬರಿಗೂ ಆದಷ್ಟು ಬೇಗನೆ ಲಸಿಕೆ ನೀಡಬೇಕು. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಲಸಿಕೆ ನೀಡುವ ಕಾರ್ಯಕ್ಕೆ ಯಾವುದೇ ತೊಂದರೆ ಇರುವುದಿಲ್ಲ.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.